ಹಂಗಾಮಿ ಸ್ಪೀಕರ್ ಆಯ್ಕೆ: ನಾಳೆ ಬೆಳಿಗ್ಗೆ 10:30ಕ್ಕೆ ಸುಪ್ರೀಂ ವಿಚಾರಣೆ
ಕರ್ನಾಟಕ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಆಯ್ಕೆಯನ್ನು ಪ್ರಶ್ನಿಸಿ....
001.jpg?w=1200&q=68&auto=format,compress)
Published On :
ನವದೆಹಲಿ: ಕರ್ನಾಟಕ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಆಯ್ಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ನಾಳೆ ಬೆಳಿಗ್ಗೆ 10:30 ಕ್ಕೆ ವಿಚಾರಣೆಗೆ ಬರಲಿದೆ.
ರಾಜ್ಯಪಾಲರಿಂದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ನೇಮಕವಾದ ಭಾರತೀಯ ಜನತಾ ಪಕ್ಷದ ಶಾಸಕ ಕೆ.ಜಿ. ಬೋಪಯ್ಯ ಅವರ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಇದೇ ವೇಳೆ ನಾಳೆ ಸಂಜೆ ನಾಲ್ಕಕ್ಕೆ ಯಡಿಯೂರಪ್ಪ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದನ್ವಯ ವಿಶ್ವಾಸಮತ ಯಾಚನೆಗೆ ಸಿದ್ದತೆ ನಡೆಸಿದೆ.
ನಾಲ್ಕು ಬಾರಿ ಶಸಕರಾಗಿ ಆಯ್ಕೆಯಾಗಿರುವ ಬೋಪಯ್ಯ ಅವರು 2009 ರಿಂದ 2013 ರವರೆಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸುಪ್ರೀಂ ಕೋರ್ಟ್Speakerಸ್ಪೀಕರ್Suprime CourtKarnataka political turmoilK G Bopaiahಕರ್ನಾಟಕ ರಾಜಕೀಯ ತಲ್ಲಣಗಳುಕೆ. ಜಿ. ಬೋಪಯ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


001.jpg?w=64&q=30&auto=format,compress)