ಕರ್ನಾಟಕ ವಿಶ್ವಾಸ ಮತ ಯಾಚನೆ: ವಾಜಪೇಯಿ ಹಾದಿ ತುಳಿಯುವರೇ ಯಡಿಯೂರಪ್ಪ?
ಅಲ್ಪಮತದೊಂದಿಗೆ ಗುರುವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅದೃಷ್ಟದ ಬೆನ್ನು ಹಿಡಿದು ಶನಿವಾರ ಬಹುಮತ ಸಾಬೀತುಪಡಿಸಲು ಮುಂದಾಗಿದ್ದಾರೆ.

Published On :
ಬೆಂಗಳೂರು: ಅಲ್ಪಮತದೊಂದಿಗೆ ಗುರುವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅದೃಷ್ಟದ ಬೆನ್ನು ಹಿಡಿದು ಶನಿವಾರ ಬಹುಮತ ಸಾಬೀತುಪಡಿಸಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನೂ ನಡೆಸುತ್ತಿದೆ. ಒಂದೊಮ್ಮೆ ವಿಸ್ವಾಸಮತ ಲಭ್ಯವಾಗುವುದಿಲ್ಲ ಎಂದಾದರೆ ಯಡಿಯೂರಪ್ಪ ಅವರು 1996ರಲ್ಲಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ತುಳಿದ ಹಾದಿಯಲ್ಲಿ ಮುನ್ನಡೆಯಲಿದ್ದಾರೆಯೇ ಎಂಬ ಪ್ರಶ್ನೆ ಕೇಳಿಬರುತ್ತಿದೆ.
1996ರಲ್ಲಿ ಲೋಕಸಭೆಯಲ್ಲಿ ಅಲ್ಪಮತ ಇದ್ದಾಗ ವಾಜಪೇಯಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು. ನಂತರ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಅಗತ್ಯ ಸದಸ್ಯ ಬಲ ಇಲ್ಲ ಎಂಬುದು ಗೊತ್ತಾಗುತ್ತಿದ್ದಂತೆ ಲೋಕಸಭೆಯಲ್ಲಿ ಭಾವನಾತ್ಮಕ ಭಾಷಣ ಮಾಡಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದರು. ಆ ಮೂಲಕ ಕೇವಲ 13 ದಿನದ ಪ್ರಧಾನಿ ಎನಿಸಿಕೊಂಡರು. ನಂತರದಲ್ಲಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾದರು.
ಈ ಬಾರಿ ಯಡಿಯೂರಪ್ಪ ಅವರು ವಾಜಪೇಯಿ ಅವರ ಹಾದಿಯಲ್ಲೇ ಮುನ್ನಡೆದು, ಬಹುಮತ ಇಲ್ಲ ಎಂದಾದರೆ ವಿಶ್ವಾಸಮತ ಯಾಚನೆಗೆ ಮುನ್ನವೇ ವಿಧಾನಸಭೆಯಲ್ಲಿ ಭಾವನಾತ್ಮಕ ಭಾಷಣ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ನಂತರ ಹೊಸ ಸರ್ಕಾರ ರಚನೆಯಾದರೆ ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬಹುದು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSಜೆಡಿಎಸ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆಕರ್ನಾಟಕ ವಿಶ್ವಾಸಮತ ಯಾಚನೆKarnataka Floor Test
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


