ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗ ಮಿತಿ ಗಂಟೆಗೆ 30 ಕಿ.ಮೀ: ಸಾರಿಗೆ ಇಲಾಖೆ ಆದೇಶ
ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ...

ಬೆಂಗಳೂರು: ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ಸಂಚಾರ ವೇಗ ಪ್ರತಿ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿರಬೇಕೆಂದು ಆದೇಶ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ರಕ್ಷಿತಾರಣ್ಯವಿದ್ದು ಇಲ್ಲಿ ವೇಗವಾಗಿ ಬಸ್ಸುಗಳು ಮತ್ತು ಇತರ ವಾಹನಗಳ ಸಂಚಾರದಿಂದ ರಸ್ತೆ ಅಪಘಾತಗಳು ಸಂಭವಿಸಿವೆ.
ಇದನ್ನು ತಡೆಯಲು ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಕರು ನಂಜನಗೂಡು, ಗುಂಡ್ಲುಪೇಟೆ, ಕೊಳ್ಳೆಗಾಲ ಮತ್ತು ಚಾಮರಾಜನಗರ ವಿಭಾಗದ ಬಸ್ಸು ಚಾಲಕರಿಗೆ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗವನ್ನು ಪ್ರತಿ ಗಂಟೆಗೆ 30 ಕಿಲೋ ಮೀಟರ್ ಗೆ ವೇಗಮಿತಿಯನ್ನು ತರಲಾಗಿದೆ.
ವನ್ಯಮೃಗ ಕಾರ್ಯಕರ್ತರು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಇದನ್ನು ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


