ಮುಸ್ಲಿಮರನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಮಾಡಬೇಕು; ಮುಸ್ಲಿಂ ಸಂಘಟನೆ
ಮುಸ್ಲಿಮರನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿಸಬೇಕೆಂದು ಮುಸ್ಲಿಂ ಸಂಘಟನೆಗಳು ಮಂಗಳವಾರ ಆಗ್ರಹಿಸಿವೆ...

Published On :
ಬೆಂಗಳೂರು; ಮುಸ್ಲಿಮರನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿಸಬೇಕೆಂದು ಮುಸ್ಲಿಂ ಸಂಘಟನೆಗಳು ಮಂಗಳವಾರ ಆಗ್ರಹಿಸಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಸ್ಲಿಂ ಸಂಘಟನೆಗಳು, ಶಿವಾಜಿನಗರದಲ್ಲಿ ಕಾಂಗ್ರೆಸ್ ಖಾಸಕ ರೋಷನ್ ಬೇಗ್ ಅವರು 7 ಬಾರಿ ಜಯಭೇರಿ ಸಾಧಿಸಿದ್ದಾರೆ. ರೋಷನ್ ಬೇಗ್ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಮಾಡಬೇಕೆಂದು ಆಗ್ರಹಿಸಿವೆ.
ಒಂದೇ ವೇಳೆ ರೋಷನ್ ಬೇಗ್ ಅವರನ್ನು ಮಾಡಲು ಸಾಧ್ಯವಾಗದೇ ಹೋದರೆ, ಮುಸ್ಲಿಂ ಸಮುದಾಯದ ಬೇರಾರನ್ನಾದರೂ ಉಪ ಮುಖ್ಯಮಂತ್ರಿ ಮಾಡಬೇಕೆಂದು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಈ ಹಿನ್ನಲೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂತಾಯಿತು. ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅತೀ ದೊಡ್ಡ ಪಕ್ಷವಾಗಿ ನಿರ್ಮಾಣವಾಗಿದ್ದು, ಮೇ.23 ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕMuslimಮುಸ್ಲಿಂDeputy Chief MinisterRoshan baigರೋಷನ್ ಬೇಗ್ಉಪ ಮುಖ್ಯಮಂತ್ರಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


