ನಗರದ ಹಲವೆಡೆ ಭಾರೀ ಮಳೆ; ಹೆಚ್'ಡಿ. ಕುಮಾರಸ್ವಾಮಿ, ಪರಮೇಶ್ವರ್ ಪದಗ್ರಹಣಕ್ಕೆ ಅಡ್ಡಿ
ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ...

Published On :
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ.
ವಿಧಾನಸೌಧ ಸುತ್ತಮುತ್ತ ಸೇರಿದಂತೆ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಧಾನಸೌಧಕ್ಕೆ ಬಳಿ ಜಮಾಯಿಸಿದ್ದ ಸಾವಿರಾರು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಹಲವು ಮಂದಿ ಕುರ್ಚಿಗಳು, ಕಟೌಟ್ ಬ್ಯಾನರ್ ಗಳನ್ನು ಕೊಡೆಗಳನ್ನಾಗಿಸಿಕೊಂಡರೆ, ಇನ್ನು ಕೆಲವರು ಮಳೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು.
ಕೆಲವರು ಮಳೆಯಲ್ಲಿ ನೆನೆಯುತ್ತಲೇ ಇದ್ದರೆ, ಇನ್ನೂ ಕೆಲವರು ವಿಧಾನಸೌಧದ ಬಳಿಯಿರುವ ಮೆಟ್ರೋ ನಿಲ್ದಾಣದ ಬಳಿ ತೆರಳಿ ಆಶ್ರಯ ಪಡೆದರು.
ಪದಗ್ರಹಣಕ್ಕೆ ಶಕ್ತಿಸೌಧದ ಆವರಣದಲ್ಲಿ ಮಾಡಲಾಗಿದ್ದ ಭರ್ಜರಿ ವೇದಿಕೆ ಮಳೆಯಿಂದಾಗಿ ತೊಯ್ದು ಹೋಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruKumaraswamyಕುಮಾರಸ್ವಾಮಿVidhana SoudhaವಿಧಾನಸೌಧKarnatakaಕರ್ನಾಟಕಮಳೆassembly electionrainOath Ceremonyಪ್ರಮಾಣವಚನ ಸ್ವೀಕಾರ ಸಮಾರಂಭ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


