ಟ್ರಾಫಿಕ್ ಎಫೆಕ್ಟ್: ಪ್ರಮಾಣವಚನ ಕಾರ್ಯಕ್ರಮಕ್ಕೆ ನಡೆದು ಬಂದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ!
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಒಂದೂವರೆ ಕಿ.ಮೀ. ನಡೆದು ವೇದಿಕೆಗೆ ಆಗಮಿಸಿದ್ದಾರೆ!
Published On :
ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೆಲ ಮೀಟರ್ ಗಳಷ್ಟು ದೂರ ನಡೆದು ವೇದಿಕೆಗೆ ಆಗಮಿಸಿದ್ದಾರೆ!
ಮಮತಾ ಬೆಂಗಳೂರು ನಗರ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ಮೂಲಗಳು ಹೇಳಿದೆ. ನಗರದ ಚಾಲುಕ್ಯ ಸರ್ಕಲ್ ನಿಂದ ವಿಧಾನಸೌಧಕ್ಕೆ ಆಗಮಿಸುವಾಗ ಉಂಟಾದ ಟ್ರಾಫಿಕ್ ಸಮಸ್ಯೆಯಿಂದಾಗಿ ಆಕೆ ವೇದಿಕೆಗೆ ನಡೆದೇ ಬರಬೇಕಾಯಿತು.
ಮಮತಾ ಬ್ಯಾನರ್ಜಿ ಮಾಜಿ ಪ್ರಧಾನಿ ದೇವೇಗೌಡರ ಎದುರು ಈ ಸಂಬಂಧ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಡಿಐಜಿ ನೀಲಮಣಿ ರಾಜು ಅವರಿಗೂ ದೂರು ಸಲ್ಲಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಿ ಆಸನ ಸ್ವೀಕರಿಸಿದ ಬಳಿಕ ಸಹ ಮುಖಂಡರೊಡನೆ ಟ್ರಾಫಿಕ್‍ನಲ್ಲಿ ಸಿಲುಕಿದ್ದರಿಂದ ನಡೆದುಕೊಂಡು ಬರುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruH.D. KumaraswamyMamata Banerjeeಮಮತಾ ಬ್ಯಾನರ್ಜಿಎಚ್.ಡಿ. ಕುಮಾರಸ್ವಾಮಿoath-taking ceremonyಪ್ರಮಾಣವಚನ ಕಾರ್ಯಕ್ರಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

