ರಾಜ್ಯ

ಕರ್ನಾಟಕ ಬಂದ್ ಗೆ ಬಿಜೆಪಿ ಕರೆ: ನಾಳೆ ಏನು ಇರುತ್ತೆ? ಏನಿರಲ್ಲ?

ರೈತರ ಸಾಲ ಮನ್ನಾಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಆದರೆ ಬಂದ್‌.....

ಕರ್ನಾಟಕ ಬಂದ್ ಗೆ ಬಿಜೆಪಿ ಕರೆ: ನಾಳೆ ಏನು ಇರುತ್ತೆ? ಏನಿರಲ್ಲ?
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ರೈತರ ಸಾಲ ಮನ್ನಾಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಆದರೆ ಬಂದ್‌ ಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೆ, ಕೆಲ ಸಂಘಟನೆಗಳು ಬೆಂಬಲ ಸೂಚಿಸಿಲ್ಲ. ಹೀಗಾಗಿ ಬಂದ್ ಇರುತ್ತೋ ಇಲ್ಲವೋ ಎನ್ನುವ ಗೊಂದಲ ಉಂಟಾಗಿದೆ.
ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ, ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡುವುದಿಲ್ಲ ಎಂದು ಹೇಳಿವೆ.
ಬಿಜೆಪಿ ಏಕಪಕ್ಷೀಯವಾಗಿ ಬಂದ್ ಗೆ ಕರೆ ನೀಡಿದೆ. ಯಾರೇ ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಿದರೆ ನಮ್ಮ ಅಭ್ಯಂತರವಿಲ್ಲ. ಬಂದ್ ಗೆ ನಮ್ಮ ಬೆಂಬಲವಿಲ್ಲ. ನಾವು ರೈತ ವಿರೋಧಿಯಲ್ಲ. ರೈತ ಪರ ಹೋರಾಟಗಳಿಗೆ ಸದಾ ನಮ್ಮ ಬೆಂಬಲ ಇದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಹೇಳಿದ್ದಾರೆ.
ಇನ್ನು ಕಬ್ಬು ಬೆಳೆಗಾರರ ಸಂಘದ ಕುರಬೂರು ಶಾಂತಕುಮಾರ್‌ ಅವರು ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈಗಷ್ಟೇ ನೂತನ ಸರ್ಕಾರ ಬಂದಿದೆ. ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡುವ ವಿಶ್ವಾಸವಿದೆ. ಬಂದ್‌ ಕುರಿತಾಗಿ ಯಾರು ನಮ್ಮನ್ನು ಸಂಪರ್ಕಿಸಿಲ್ಲ. ನಾವು ಬೆಂಬಲ ನೀಡುವುದಿಲ್ಲ ಎಂದಿದ್ದಾರೆ. 
ರೈತ ಸಂಘಟನೆಗಳು ಕರೆ ನೀಡಿರುವ ಬಂದ್‌ ಅನ್ನು ಬಿಜೆಪಿ ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ಇರುವು ದರಿಂದ ಬೆಂಗಳೂರು ಬಿಟ್ಟು ಉಳಿದ ಕಡೆಗಳಲ್ಲಿ ಬಂದ್‌ ನಡೆಯಲಿದೆ ಎಂದು ಅವರು ಹೇಳಿದ್ದಾರೆ. 
ಕುರಿತು ಮಾಹಿತಿ ನೀಡಿರುವ ಬಿಜಿಪಿ ಶಾಸಕ ಶ್ರೀರಾಮುಲು ಅವರು, ಅಧಿಕಾರಕ್ಕೆ ಬಂದ ಕೂಡಲೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತು ತಪ್ಪಿದ್ದಾರೆ. ಸಿಎಂ ಕುಮಾರಸ್ವಾಮಿ ವಿರುದ್ಧ ಈಗ ರಾಜ್ಯ ಬಂದ್ ಮೂಲಕ ರೈತರು ಧ್ವನಿ ಎತ್ತುತ್ತಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ. ಬೆಂಗಳೂರು ಹೊರತುಪಡಿಸಿ ಇಡೀ ರಾಜ್ಯಾದ್ಯಂತ ಬಂದ್ ಆಚರಿಸಲಾಗುತ್ತದೆ ಎಂದಿದ್ದಾರೆ.
ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ
ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಖಾಸಗಿ ಶಾಲಾ-ಕಾಲೇಜುಗಳು ಸಹ ರಜೆಯನ್ನು ಘೋಷಣೆ ಮಾಡಿಲ್ಲ. ಬಂದ್ ಗೆ ಹೋಟೆಲ್ ಮಾಲೀಕರು ಸಹ ಬೆಂಬಲ ನೀಡಿಲ್ಲ. 
ಬಸ್, ಮೆಟ್ರೋ ಸಂಚಾರ ಎಂದಿನಂತೆ 
ಸೋಮವಾರ ಬಸ್, ಮೆಟ್ರೋ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ನಮ್ಮ ಮೆಟ್ರೋ, ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸಲಿವೆ. ಬೆಂಗಳೂರಿನ ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿವೆ. ಆದರೆ, ಆಟೋ ಚಾಲಕರು ಮಾತ್ರ ಬಂದ್ ಬಗ್ಗೆ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.