ಊಟಿಯಲ್ಲಿ ಪ್ರಪಾತಕ್ಕೆ ಬಿದ್ದ ಬೆಂಗಳೂರಿನ ಪ್ರವಾಸಿಗರ ಬಸ್: ನಾಲ್ವರ ದುರ್ಮರಣ, 10 ಗಾಯ
ಬೆಂಗಳೂರಿನಿಂದ ತಮಿಳುನಾಡಿನ ಊಟಿಗೆ ಪ್ರವಾಸಕ್ಕೆಂದು ತೆರಳಿದ್ದ 30 ಜನರಿದ್ದ ಖಾಸಗಿ ಬಸ್ ಮಧ್ಯರಾತ್ರಿ ಪ್ರಪಾತಕ್ಕೆ ಬಿದ್ದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ...

Published On :
ಬೆಂಗಳೂರು: ಬೆಂಗಳೂರಿನಿಂದ ತಮಿಳುನಾಡಿನ ಊಟಿಗೆ ಪ್ರವಾಸಕ್ಕೆಂದು ತೆರಳಿದ್ದ 30 ಜನರಿದ್ದ ಖಾಸಗಿ ಬಸ್ ಮಧ್ಯರಾತ್ರಿ ಪ್ರಪಾತಕ್ಕೆ ಬಿದ್ದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ 30 ಜನರ ತಂಡ ಊಟಿಗೆ ಪ್ರವಾಸಕ್ಕೆ ತೆರಳಿದ್ದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ಬಸ್ 500 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದು ಈ ಘಟನೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು 10 ಮಂದಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ನಿವಾಸಿಗಳು ಎಂದು ತಿಳಿದುಬಂದಿದೆ. ಊಟಿಯಲ್ಲಿ ಪ್ರವಾಸಿ ಸ್ಥಳಗಳ ವೀಕ್ಷಣೆ ಮುಗಿಸಿ ರಾತ್ರಿ ಮಡಿಕೇರಿಗೆ ತೆರಳುತ್ತಿದ್ದರು. ಈ ವೇಳೆ ತವಲಮಲೈ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರವಾಸಕ್ಕೆ ಉರುಳಿ ಬಿದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


