ಕಾಂಗ್ರೆಸ್ ಪಕ್ಷದ ಅನುಮತಿ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ- ಹೆಚ್. ಡಿ. ಕುಮಾರಸ್ವಾಮಿ
ಕಾಂಗ್ರೆಸ್ ಪಕ್ಷದ ಅವಲಂಬಿತ ಮುಖ್ಯಮಂತ್ರಿ ತಾನಾಗಿದ್ದು, ಆ ಪಕ್ಷದ ಅನುಮತಿ ಪಡೆಯದೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅವಲಂಬಿತ ಮುಖ್ಯಮಂತ್ರಿ ತಾನಾಗಿದ್ದು, ಆ ಪಕ್ಷದ ಅನುಮತಿ ಪಡೆಯದೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಅಭಿವೃದ್ದಿ ವಿಚಾರದಲ್ಲಿ ನನ್ನ ಜವಾಬ್ದಾರಿ ಬೇರೆಯಾಗಿರುತ್ತದೆ. ಆದರೆ. ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಬೇಕಾದ್ದರೆ, ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿಯೇ ಇರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಪುನರ್ ಉಚ್ಚರಿಸಿದರು.
ಜೆಡಿಎಸ್ ಪಕ್ಷವನ್ನು ಸ್ವಂತ ಬಲದ ಆಧಾರದ ಮೇಲೆ ಅಧಿಕಾರಕ್ಕೆ ತರುವಂತೆ ಜನತೆಯಲ್ಲಿ ಮನವಿ ಮಾಡಿದ್ದೇ. ಆದರೆ, ಈಗ ಕಾಂಗ್ರೆಸ್ ನಾಯಕರು ಮೇಲೆ ಅವಲಿಂಬಿತವಾಗುವಂತೆ ಮಾಡಿದ್ದಾರೆ. ಇದು ನನ್ನ ಸ್ವತಂತ್ರ ಸರ್ಕಾರವಲ್ಲ, ರಾಜ್ಯದ 6 ಕೋಟಿ ಜನಸಂಖ್ಯೆಯ ಕಾರಣದಿಂದ ನಾನು ಇಲ್ಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಮೇ 23 ರಂದು ಅಧಿಕಾರ ಸ್ವೀಕರಿಸಿದ್ದರು. ಇಬ್ಬರು ಪಕ್ಷೇತರ ಸದಸ್ಯರೊಂದಿಗೆ ನೂತನ ಸಂಮಿಶ್ರ ಸರ್ಕಾರ 117 ಸದಸ್ಯರನ್ನು ಹೊಂದಿದ್ದು, ಸರಳ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


