ರಾಜ್ಯ

ಬೆಂಗಳೂರು: ವಿಜ್ಞಾನ ಸಮ್ಮೇಳನದಲ್ಲಿ ವಿಜ್ಞಾನಿ ಬಳಿಯಿದ್ದ ರು.3 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ!

ಕಳೆದ ವಾರ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದ ವಿಜ್ಞಾನ ಸಮ್ಮೇಳನದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ಮೆರೆದಿದ್ದಾನೆ...

ಬೆಂಗಳೂರು: ವಿಜ್ಞಾನ ಸಮ್ಮೇಳನದಲ್ಲಿ ವಿಜ್ಞಾನಿ ಬಳಿಯಿದ್ದ ರು.3 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ!
ಸಂಗ್ರಹ ಚಿತ್ರ
Published On :
ಬೆಂಗಳೂರು: ಕಳೆದ ವಾರ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದ ವಿಜ್ಞಾನ ಸಮ್ಮೇಳನದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ಮೆರೆದಿದ್ದಾನೆ. 
ಮುಂಬೈ ಮೂಲದ ಮಹಿಳಾ ಜೆನೆಟಿಕ್ ವಿಜ್ಞಾನಿ ಡಾ. ಮಂಜೀತ್ ಮೆಹ್ತಾ ಬಳಿಯಿದ್ದ 3 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದು ಈ ಸಂಬಂಧ ಮಂಜೀತ್ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 
ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇ 24 ಮತ್ತು 25ರಂದು ಎರಡು ದಿನಗಳ ಕಾಲ ಸಮ್ಮೇಳನ ನಡೆದಿದ್ದು, ಮೇ 24ರಂದು ಚಿನ್ನಾಭರಣವನ್ನು ಪರ್ಸ್ ನಲ್ಲಿಟ್ಟು ನನ್ನ ಪಕ್ಕದಲ್ಲಿ ಇಟ್ಟುಕೊಂಡಿದ್ದೆ. ನಂತರ ಹೋಟೆಲ್ ರೂಂಗೆ ಹೋಗಿ ನೋಡಿದಾಗ ಒಡವೆ ಕಳ್ಳತನವಾಗಿರುವ ಬಗ್ಗೆ ಅರಿವಿಗೆ ಬಂತು. ನಂತರ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದು ಅದರಲ್ಲಿ ವ್ಯಕ್ತಿಯೊರ್ವ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.