ರಾಜ್ಯ

ಸಿಎಂ ಮೊದಲ ಜನತಾ ದರ್ಶನ: ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮೊದಲ ಜನತಾ....

ಸಿಎಂ ಮೊದಲ ಜನತಾ ದರ್ಶನ: ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮೊದಲ ಜನತಾ ದರ್ಶನ ನಡೆಸಿ, ನಾಗರಿಕರ ಸಮಸ್ಯೆಗಳನ್ನು ಆಲಿಸಿದರು.
ಇಂದು ಜನತಾ ದರ್ಶನಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಜನ ಬೆಳಗ್ಗೆ 8 ಗಂಟೆಯಿಂದಲೇ ಕಾಯುತ್ತಿದ್ದರು. 
ಹಿರಿಯ ನಾಗರಿಕರು ನಿವೇಶನ, ಮಾಸಾಶನಕ್ಕಾಗಿ ಮನವಿ ಸಲ್ಲಿಸಿದರು. ಯುವ ವರ್ಗ ಉದ್ಯೋಗಕ್ಕಾಗಿ ಮನವಿ ಸಲ್ಲಿಸಿತು. ಇನ್ನು ಕುಮಾರಸ್ವಾಮಿ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನಡೆಸಿದ್ದ ಜನತಾ ದರ್ಶನದಲ್ಲಿ ಪರಿಹಾರ ಕಂಡು ಕೊಂಡವರು ಅವರನ್ನು ಭೇಟಿಯಾಗಿ ಅಭಿನಂದನೆಗಳನ್ನೂ ಸಲ್ಲಿಸಿದರು.
ಕುಮಾರಸ್ವಾಮಿ 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಭಾರಿ ಜನಪ್ರಿಯತೆ ಪಡೆದಿತ್ತು.
ಚಿಕಿತ್ಸೆ ವೆಚ್ಚ ನೋಡಿಕೊಳ್ಳುತ್ತೇನೆ
ರಾಜಾಜಿನಗರದಿಂದ ಬಂದ ಮಹಿಳೆಯೊಬ್ಬರು ತಮ್ಮ ಪತಿಗೆ ಕ್ಯಾನ್ಸರ್ ಬಂದಿರುವುದಾಗಿಯೂ, ನೆರವು ನೀಡಬೇಕಾಗಿಯೂ ಕೋರಿದರು. ಕುಮಾರಸ್ವಾಮಿ ಅವರು ನಾನು ನೆರವು ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು. ಇದರಿಂದ ಮಹಿಳೆ ಮುನಿಯಮ್ಮ ಸಂತಸಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.