ಮಹಾಮಳೆಗೆ ಮಂಗಳೂರು ತತ್ತರ; ಅಗತ್ಯ ಕ್ರಮಗಳಿಗೆ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಸೂಚನೆ
ಮಂಗಳೂರಿನಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಮಳೆ ಸಂತ್ರಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Published On :
ನವದೆಹಲಿ: ಮಂಗಳೂರಿನಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಮಳೆ ಸಂತ್ರಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇಂದು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿನ ಜನರು ಸುರಕ್ಷಿತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಂತೆಯೇ ಮಳೆ ಪೀಡಿತ ಪ್ರದೇಶಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಗಲ್ಫ್ ರಾಷ್ಟ್ರಗಳಲ್ಲಿ ಅಬ್ಬರಿಸಿದ್ದ ಮೆಕುನು ಚಂಡಮಾರುತ ಪರಿಣಾಮ ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರಿಮಳೆಯಿಂದಾಗಿ ಮಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಂಗಳೂರು ಮಾತ್ರವಲ್ಲದೇ ಉಡುಪಿ, ಕರಾವಳಿಯಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕುಡ್ಲ ಪ್ರವಾಹದಲ್ಲಿ ಮಳುಗಿದೆ. ಪರಿಣಾಮ ಉಡುಪಿಯಲ್ಲಿ 2 ದಿನಗಳಗ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


