ಚಿಂತಾಮಣಿ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹೋಂಗಾರ್ಡ್
ಬೆಂಗಳೂರಿನ ಹಲಸೂರಿನಲ್ಲಿ ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸುನೀಲ್ ಕುಮಾರ್ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಮಾತ್ರೆ ಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Published On :
ಚಿಂತಾಮಣಿ: ಬೆಂಗಳೂರಿನ ಹಲಸೂರಿನಲ್ಲಿ ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸುನೀಲ್ ಕುಮಾರ್ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಮಾತ್ರೆ ಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಜೆ ಮೇಲೆ ತಮ್ಮ ಊರಾದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮಕ್ಕೆ ಬಂದಿದ್ದ ಸುನಿಲ್ ಕುಮಾರ್ ಕಳೆದ ರಾತ್ರಿ ತಮ್ಮ ಮನೆಯಲ್ಲಿ ವಿಷ ಸೇವಿಸುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ.
ಇದನ್ನು ಕಂಡ ಪೋಷಕರು ತಕ್ಷಣ ಮಾತ್ರೆ ಸೇವಿಸಿ ನಿತ್ರಾಣಗೊಂಡಿದ್ದ ಸುನೀಲ್ ಕುಮಾರ್ ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು ಪ್ರಯೋಜನವಾಗದೇ ಸುನೀಲ್ ಮೃತಪಟ್ಟಿದ್ದಾರೆ.
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


