ರಾಜ್ಯ

ನ್ಯಾಯಾಲಯ ಸಿಬ್ಬಂದಿಗಳ ವೇತನ ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಕರ್ನಾಟಕ ರಾಜ್ಯಹೈಕೋರ್ಟ್ ನಲ್ಲಿ ಕೆಲಸ ಮಾಡುತ್ತಿರುವ 2,000 ಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳಿಗೆ ಕಳೆದ 14 ವರ್ಷಗಳಿಂದ ಉಳಿಸಿಕೊಂಡಿರುವ ಹಿಂಬಾಕಿ ಹಾಗೂ 2018ರ ಏಪ್ರಿಲ್....

ನ್ಯಾಯಾಲಯ ಸಿಬ್ಬಂದಿಗಳ ವೇತನ ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ಕೆಲಸ ಮಾಡುತ್ತಿರುವ  2,000 ಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳಿಗೆ  ಕಳೆದ 14 ವರ್ಷಗಳಿಂದ ಉಳಿಸಿಕೊಂಡಿರುವ ಹಿಂಬಾಕಿ ಹಾಗೂ 2018ರ ಏಪ್ರಿಲ್ ಹಾಗೂ ಮೇ ತಿಂಗಳ ಪರಿಷ್ಕೃತ ವೇತನವನ್ನು ತಕ್ಷಣ ಪಾವತಿಸಬೇಕೆಂದು ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ.
ವೇತನ ಪಾವತಿಸಿದ ಕುರಿತು ಹಸ್ತಲಿಖಿತವಾದ ಬಿಲ್ ಗಳನ್ನು ತನಗೆ ನೀಡುವಂತೆಯೂ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಕೇಂದ್ರ ಸರ್ಕಾರಿ ನೌಕರರ ವೇತನಶ್ರೇಣಿಗೆ ಅನುಗುಣವಾಗಿ ಹೈಕೋರ್ಟ್ ನೌಕರರ ವೇತನ ಪರಿಷ್ಕರಣೆಗೆ  ಸುಪ್ರೀಂ ಕೋರ್ಟ್ ಸೂಚಿಸಿದ್ದರೂ ಸಹ ರಾಜ್ಯ ಸರ್ಕಾರ ಇದನ್ನು ಪಾಲಿಸದ ಕಾರಣ ರ್ನಾಟಕ ಹೈಕೋರ್ಟ್ ನೌಕರರ ಕಲ್ಯಾಣ ಸಂಘ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ  ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನಿಡಿದೆ.
ಏಪ್ರಿಲ್ 2018 ರ ಸಂಬಳವನ್ನು ನೀಡುವಲ್ಲಿ ನಾಲ್ಕು ವಾರ ಕಾಲಾವಧಿ ತೆಗೆದುಕೊಂಡ ಸರ್ಕಾರದ ಕ್ರಮವನ್ನು ಗಮನಿಸಿದ ನ್ಯಾಯಾಲಯ ಅಸಮಾಧಾನಗೊಂಡಿದೆ. ವೇತನ ಪಾವತಿ ಸಾಫ್ಟ್​ವೇರ್​ನಲ್ಲಿ ಕೆಲ ದೋಷಗಳಿದ್ದು ಅದು ಕಾರ್ಯನಿರ್ವಹಿಸುವವರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಅವರು ಖಜಾನೆಗೆ ಸಲ್ಲಿಸುವ ಮ್ಯಾನುವಲ್ ಬಿಲ್​ಗಳ ಮೇಲೆ ಹಣ ಬಿಡುಗಡೆ ಮಾಡಲು ಹಣಕಾಸು ಇಲಾಖೆ ಸಿದ್ಧವಿರುವುದಾಗಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಯಿಸಿದ ನ್ಯಾಯಾಲಯ  "ನಾವು  ವೇತನದ ವಿತರಣೆಯಲ್ಲಿ ವಿಳಂಬವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆಯ ಉಪಸ್ಥಿತಿಗಾಗಿ ಹೆಚ್ಚುವರಿ ಸರ್ಕಾರಿ ಅಡ್ವೊಕೇಟ್ ಗೆ ಸೂಚಿಸಿದ್ದೇವೆ. ಹಿಂಬಾಕಿಯನ್ನು ಬಡ್ಡಿ ಸಹಿತ ಪಾವತಿಸಬೇಕು. ಜತೆಗೆ ಕಳೆದ 2 ತಿಂಗಳ ಪರಿಷ್ಕೃತ ವೇತನವನ್ನೂ ಬಿಡುಗಡೆಗೊಳಿಸಬೇಕು ಸರ್ಕಾರ ವೇತನ ಪಾವರ್ತಿ ಮಾಡಿರುವ ಸಂಬಂಧ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು" ಎಂದಿದೆ. 
ಮುಂದಿನ  ವಿಚಾರಣೆಯನ್ನು ನ್ಯಾಯಾಲಯಮೇ 30ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.