ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಜಾಮೀನು ಭವಿಷ್ಯ ನಾಳೆ ನಿರ್ಧಾರ
ಉದ್ಯಮಿ ಪುತ್ರ ವಿದ್ವತ್ ಮೇಲೆ ಗಂಭೀರ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಪ್ರಕರಣದ ಜಾಮೀನು ಅರ್ಜಿಯ ತೀರ್ಪು ಪ್ರಕಟವನ್ನು ನ್ಯಾಯಾಲಯ ಬುಧವಾರಕ್ಕೆ ಕಾಯ್ದಿರಿಸಿದೆ.

Published On :
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಗಂಭೀರ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಪ್ರಕರಣದ ಜಾಮೀನು ಅರ್ಜಿಯ ತೀರ್ಪು ಪ್ರಕಟವನ್ನು ನ್ಯಾಯಾಲಯ ಬುಧವಾರಕ್ಕೆ ಕಾಯ್ದಿರಿಸಿದೆ.
ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ಗೆ ಜಾಮೀನು ಅರ್ಜಿಯ ಭವಿಷ್ಯ ನಾಳೆ ಪ್ರಕಟವಾಗಲಿದ್ದು, ಜಾಮೀನು ಅರ್ಜಿಯ ತೀರ್ಪನ್ನು 63ನೇ ಎಸಿಎಂಎಂ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ.
ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ನಲಪಾಡ್ ಪರ ವಕೀಲರ ವಾದ ಆಲಿಸಿದ 63ನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಪರಮೇಶ್ವರ್, ಜಾಮೀನು ಅರ್ಜಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ನಿನ್ನೆ ನಡೆದ ವಿಚಾರಣೆಯಲ್ಲೂ ನಲಪಾಡ್ ಪರ ವಕೀಲ ತಮ್ಮ ವಾದವನ್ನು ಮಂಡಿಸಿ, ಜಾಮೀನು ಮಂಜೂರಿಗೆ ಕೋರಿಕೆ ಸಲ್ಲಿಕೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruCrimeಅಪರಾಧkarnataka policeಕರ್ನಾಟಕ ಪೊಲೀಸ್ACMM Courtಎಸಿಎಂಎಂ ನ್ಯಾಯಾಲಯNalapad caseನಲಪಾಡ್ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


