ರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ 'ಬ್ಯಾರೇಜ್ ಹೀರೋ' ಸಿದ್ದು ನ್ಯಾಮಗೌಡ ಅಂತ್ಯಸಂಸ್ಕಾರ

ರಸ್ತೆ ಅಪಘಾತದಲ್ಲಿ ಸೋಮವಾರ ನಸುಕಿನಲ್ಲಿ ಅಸುನೀಗಿದ್ದ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಜಮಖಂಡಿ ತಾಲ್ಲೂಕಿನ ನಾಗನೂರಿನ....

ಸಕಲ ಸರ್ಕಾರಿ ಗೌರವಗಳೊಂದಿಗೆ 'ಬ್ಯಾರೇಜ್ ಹೀರೋ' ಸಿದ್ದು ನ್ಯಾಮಗೌಡ ಅಂತ್ಯಸಂಸ್ಕಾರ
ಸಿದ್ದು ನ್ಯಾಮಗೌಡರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್
Published On :
ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಸೋಮವಾರ ನಸುಕಿನಲ್ಲಿ ಅಸುನೀಗಿದ್ದ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಜಮಖಂಡಿ ತಾಲ್ಲೂಕಿನ ನಾಗನೂರಿನ ‘ಜಮಖಂಡಿ ಶುಗರ್ಸ್’ ಕಾರ್ಖಾನೆ ಆವರಣದಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ  ನೆರವೇರಿತು.
ಜಮಖಂಡಿಯಿಂದ ನಾಗನೂರಿಗೆ ಅಂತಿಮ ಮೆರವಣಿಗೆ ನಡೆಯಿತಿ, ಈ ವೇಳೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಲಾಯಿತು. ಲಿಂಗಾಯತ- ವೀರಶೈವ ವಿಧಿ ವಿಧಾನದಂತೆ ಅಂತ್ಯ ಸಂಸ್ಕಾರ ನಡೆಸಲಾಯಿತು.
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಾಪುರ ಜಿಲ್ಲೆಗಳಲ್ಲಿ ಅಂತ್ಯಕ್ರಿಯೆ ಮೆರವಣಿಗೆ ನಡೆಯಿತು. ಈ ವೇಳೆ ಅವರ ಅಪಾರ ಅಭಿಮಾನಿಗಳು ಸಿದ್ದು ನ್ಯಾಮಗೌಡ ಮತ್ತೆ ಹುಟ್ಟಿ ಬಾ ಎಂದು ಘೋಷಣೆ ಕೂಗಲಾಯಿತು. ಜಮಖಂಡಿಯ ಎಲ್ಲಾ ಅಂಗಡಿ ಮಾಲೀಕರು ತಮ್ಮ ಅಂಗಡಿಗಳನ್ನು ಸ್ವಇಚ್ಚೆಯಿಂದ ಮುಚ್ಚಿದ್ದರು. 
ಕುಶಾಲ ತೋಪು ಸಿಡಿಸಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್‌ ಸರ್ಕಾರದ ಪರವಾಗಿ ಗೌರವ ಸಲ್ಲಿಸಿದರು. 
ಅಂತಿಮ ದರ್ಶನ: ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಮಖಂಡಿಯ ಪೊಲೊ ಮೈದಾನದಲ್ಲಿ ಇಡಲಾಗಿದ್ದ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಡಿಸಿಎಂ ಪರಮೇಶ್ವರ್  ಹಿರಿಯ ನಾಯಕ ಸಿದ್ದು ನ್ಯಾಮಗೌಡ ಅವರ ಸಾವು ತುಂಬಲಾರದ ನಷ್ಟ, ರೈತರಿಗೆ ನ್ಯಾಯ ಒದಗಿಸಲು ನಡೆಸಿದ ಹೋರಾಟ ಎಂದಿಗೂ ಮರೆಯಲಾಗದು, ಕಾಂಗ್ರೆಸ್ ಗೆ ಅವರ ಸಾವಿನಿಂದ ಅಪಾರ ನಷ್ಟವಾಗಿದೆ. ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.