ಮಂಗಳೂರು: ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ
ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ...

Published On :
ಮಂಗಳೂರು: ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ.
ಮಂಗಳೂರಿನ ಉದಯನಗರದ ಮೋಹಿನಿ ಹಾಗೂ ಕೊಡಿಯಾಲಬೈಲ್ ನ ಮುಕ್ತಾಬಾಯಿ ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ 5 ಲಕ್ಷ ರುಪಾಯಿ ಪರಿಹಾರಧನದ ಚೆಕ್ ಅನ್ನು ವಿತರಿಸಿದರು.
ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾಮಳೆಗೆ ಈವರೆಗೂ ಇಬ್ಬರ ಬಲಿಯಾಗಿದ್ದಾರೆ. ಪಡುಬಿದ್ರಿಯಲ್ಲಿ ಓರ್ವ ಬಾಲಕಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದು 9 ವರ್ಷ ನಿಧಿ ಆಚಾರ್ಯ ಮೃತದೇಹ ಇಂದು ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


