ಮಂಗಳೂರು ಮಹಾಮಳೆ: ವಿಪತ್ತು ನಿರ್ವಹಣೆಗೆ ಕೇಂದ್ರದಿಂದ ಸಂಪೂರ್ಣ ಸಹಕಾರ: ಬಿಎಸ್ ಯಡಿಯೂರಪ್ಪ
ಮಹಾಮಳೆಯಿಂದಾಗಿ ತತ್ತರಿಸಿ ಹೋಗಿರುವ ಮಂಗಳೂರು ನಗರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Published On :
ಮಂಗಳೂರು: ಮಹಾಮಳೆಯಿಂದಾಗಿ ತತ್ತರಿಸಿ ಹೋಗಿರುವ ಮಂಗಳೂರು ನಗರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಂಗಳೂರು, ಕಾರವಾರ, ಉಡುಪಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಸುರಿಯುತ್ತಿರುವ ಭಾರಿ ಮಳೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ, ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿನ ಜನರು ಸುರಕ್ಷಿತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಳೆ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಮಳೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಬಿಎಸ್ ವೈ ಮನವಿ ಮಾಡಿದ್ದಾರೆ. ಇನ್ನು ಮಳೆ ವಿಚಾರಕ್ಕೆ ಸಂಬಂಧಿಸಿದಂತೆ ತಾವು ಕೇಂದ್ರ ಗೃಹ ಸಚಿನ ರಾಜನಾಥ್ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಮಳೆ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳ ನೆರವಿಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ವಿಪತ್ತು ನಿರ್ವಹಣೆಗೆ ಕೇಂದ್ರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದೆ ಎಂದು ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್ಮಂಗಳೂರುbjpKarnatakaಕರ್ನಾಟಕRajnath SinghBS Yeddyurappaಭಾರಿ ಮಳೆಬಿಎಸ್ ಯಡಿಯೂರಪ್ಪMangaluru Heavy Rainಮೆಕುನು ಚಂಡಮಾರುತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


