ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾ
ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಜಾಮೀನು ....

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ಬುಧವಾರ ಎರಡನೇ ಬಾರಿ ವಜಾಗೊಳಿಸಿದೆ.
ಇದೊಂದು ಕೊಲೆಯತ್ನ ಪ್ರಕರಣವಾಗಿದ್ದು, ಬೆಂಗಳೂರಿನಲ್ಲಿಯೇ ಭೀತಿ ಹುಟ್ಟಿಸುವ ಘಟನೆಯಾಗಿತ್ತು. ಆರೋಪಿ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹೊರಬಂದರೆ ಸಾಕ್ಷಿಗಳನ್ನು ನಾಶಪಡಿಸುವ, ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆಯಿರುವುದರಿಂದ ಮತ್ತು ವೈದ್ಯಕೀಯ ವರದಿಗಳನ್ನು ನಾಶಪಡಿಸುವ ಸಾಧ್ಯತೆಯಿರುವುದರಿಂದ ನಲಪಾಡ್ ಗೆ ಜಾಮೀನು ನೀಡಲು ನಿರಾಕರಿಸಿ ನ್ಯಾಯಾಧೀಶ ಬಿ.ಪರಮೇಶ್ವರ್ ಪ್ರಸನ್ನ ಆದೇಶ ನೀಡಿದ್ದಾರೆ.
ವಿದ್ವತ್ ನೀಡಿದ ಘಟನೆಯ ವಿವರ 'ಇದು ಭಯ ಹುಟ್ಟಿಸುವ ಪ್ರಕರಣವಾಗಿದೆ. ಆರೋಪಿ ಪ್ರಭಾವಿಯಾಗಿದ್ದು, ಹೊರ ಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಾದ ಮಂಡನೆ ಮಾಡಲಾಗಿತ್ತು. ವಾದಕ್ಕೆ ಮನ್ನಣೆ ನೀಡಿದ ಕೋರ್ಟ್, ಅರ್ಜಿ ತಿರಸ್ಕರಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ್ ಸುಂದರ್ ಹೇಳಿದರು.
ಫೆಬ್ರವರಿಯಿಂದ 99 ದಿನಗಳಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಹೀಗಾಗಿ ತನಗೆ ಜಾಮೀನು ನೀಡಬೇಕೆಂದು ನಲಪಾಡ್ ಪರ ವಕೀಲ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಂ ಸುಂದರ್ ಅವರು ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು.
ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿ 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಈ ಪ್ರಕರಣದ ಆರೋಪಿಗಳಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


