ಗೌರಿ ಲಂಕೇಶ್ ಹತ್ಯೆ: ಎಸ್ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಮೊದಲ ಹಂತದಲ್ಲಿ 650 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ..

Published On :
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಮೊದಲ ಹಂತದಲ್ಲಿ 650 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ..
ಗೌರಿ ಲಂಕೇಶ್ ಹತ್ಯೆಯಾಗಿ ಎಂಟು ತಿಂಗಳ ಬಳಿಕ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. .ಈ ದೋಷಾರೋಪ ಪಟ್ಟಿಯಲ್ಲಿ 131 ಸಾಕ್ಷಿಗಳ ಹೇಳಿಕೆ ದಾಖಲಾಗಿದೆ.
ಕೆ.ಟಿ. ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನಿಗೆ ಗೌರಿ ಹಂತಕರ ಕುರಿತಂತೆ ಸಂಪೂರ್ಣ ಮಾಹಿತಿ ಇತ್ತು. ಆದರೆ ಹಂತಕರ ಕುರುಹು ದೊರೆಯುತ್ತದೆ ಎನ್ನುವ ಕಾರಣಕ್ಕೆ ಅವರ ಹೆಸರನ್ನು ಹೇಳುತ್ತಿಲ್ಲ, ಅದೇ ಕಾರಣಕ್ಕೆ ಆತ ಮಂಪರು ಪರೀಕ್ಷೆಯನ್ನೂ ನಿರಾಕರಿಸಿದ್ದಾನೆ ಎಂದು ದೋಷಾರೋಪ ಪಟ್ಟಿಯಲಿ ಉಲ್ಲೇಖಿಸಲಾಗಿದೆ.
2017ರ ಸೆಪ್ಟೆಂಬರ್ 5ರಂದು ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ಅವರ ಮನೆಯ ಎದುರೇ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಆ ದಾಳಿಯಲ್ಲಿ ಗೌರಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


