ರಾಜ್ಯ

ಮಂಗಳೂರು ಮಹಾಮಳೆ; ಮತ ಹಾಕಲಿಲ್ಲ ಎಂದು ನಿರ್ಲಕ್ಷ್ಯ ಬೇಡ: ಸಿಎಂ ಎಚ್ ಡಿಕೆ ವಿರುದ್ದ ಚಕ್ರವರ್ತಿ ಸೂಲಿಬೆಲೆ ಕಿಡಿ

ಮಂಗಳೂರು ಮಹಾಮಳೆ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಸಿಎಂ ಎಚ್ ಕುಮಾರಸ್ವಾಮಿ ಅವರ ವಿರುದ್ದ ಕಿಡಿಕಾರಿದ್ದಾರೆ.

ಮಂಗಳೂರು ಮಹಾಮಳೆ; ಮತ ಹಾಕಲಿಲ್ಲ ಎಂದು ನಿರ್ಲಕ್ಷ್ಯ ಬೇಡ: ಸಿಎಂ ಎಚ್ ಡಿಕೆ ವಿರುದ್ದ ಚಕ್ರವರ್ತಿ ಸೂಲಿಬೆಲೆ ಕಿಡಿ
ಸಂಗ್ರಹ ಚಿತ್ರ
Published On :
ಮಂಗಳೂರು: ಮಂಗಳೂರು ಮಹಾಮಳೆ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಸಿಎಂ ಎಚ್ ಕುಮಾರಸ್ವಾಮಿ ಅವರ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಬರೆದಿರುವ ಅವರು, ಮಂಗಳೂರಿನಲ್ಲಿ ಭಾರಿಮಳೆಯಿಂದಾಗಿ ಅಲ್ಲಿನ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಟ ಅಂಬರೀಶ್ ಅವರ ಜನುಮದಿನದಲ್ಲಿ ಭಾಗಿಯಾಗಿರುವ ಸಿಎಂ ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಅರಿವಿದೆಯೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಮಂಗಳೂರಿಗರು ಮತ ಹಾಕಿಲ್ಲ ಎಂದು ನಿರ್ಲಕ್ಷ್ಯ ತೋರುತ್ತಿದ್ದಿರಾ ಎಂದು ಕಿಡಿಕಾರಿದ್ದಾರೆ. ಅವರ ಸಮಸ್ಯೆಗಳನ್ನೂ ನಿರ್ಲಕ್ಷ್ಯ ಮಾಡಬಾರದು ಎಂದು ಚಕ್ರವರ್ತಿ ಸೂಲಿಬೆಲೆ ಸಿಎಂಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ ಸಿಎಂ ಕಚೇರಿಯ ಟ್ವೀಟ್ ವೊಂದನ್ನು ಲಗತ್ತಿಸಿರುವ ಸೂಲಿಬೆಲೆ, ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಮುಖ್ಯಮಂತ್ರಿ ಕಾರ್ಯಾಲಯ ತನ್ನ ಟ್ವಿಟರ್ ಖಾತೆಯಲ್ಲಿ ಕುಮಾರಸ್ವಾಮಿ ಅವರು ಅಂಬರೀಷ್ ಅವರಿಗೆ ಹುಟ್ಟುಹಬ್ಬದ ಶುಭಕೋರಿದ ಸಂದೇಶವನ್ನು ಅಪ್ಲೋಡ್ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.