ವಿರೋಧದ ನಡುವೆಯು ಬೆಂಗಳೂರಿನ ಸಿಆರ್'ಪಿಎಫ್ ಕೇಂದ್ರ ಉತ್ತರಪ್ರದೇಶಕ್ಕೆ ಸ್ಥಳಾಂತರ
ಸಿಲಿಕಾನ್ ಸಿಟಿಯ ಹೊರವಲಯದ ತರಳು ಗ್ರಾಮದಲ್ಲಿರುವ ಸಿಆರ್'ಪಿಎಫ್'ನ ಎರಡು ದೊಡ್ಡ ತರಬೇತಿ ಕೇಂದ್ರಗಳನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ತವರು ಜಿಲ್ಲೆಯಾಗಿರುವ ಉತ್ತರ ಪ್ರದೇಶದ ಚಾಂದೌಲಿಗೆ ಶೀಘ್ರಗತಿಯಲ್ಲಿ ಸ್ಥಳಾಂತರ ಮಾಡುವಂತೆ...

Published On :
ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವಲಯದ ತರಳು ಗ್ರಾಮದಲ್ಲಿರುವ ಸಿಆರ್'ಪಿಎಫ್'ನ ಎರಡು ದೊಡ್ಡ ತರಬೇತಿ ಕೇಂದ್ರಗಳನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ತವರು ಜಿಲ್ಲೆಯಾಗಿರುವ ಉತ್ತರ ಪ್ರದೇಶದ ಚಾಂದೌಲಿಗೆ ಶೀಘ್ರಗತಿಯಲ್ಲಿ ಸ್ಥಳಾಂತರ ಮಾಡುವಂತೆ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಸುಮಾರು 8,000 ಸಿಬ್ಬಂದಿಗಳನ್ನು ಹೊಂದಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಬೆಂಗಳೂರಿನ ಘಟಕವನ್ನು ವಾರಣಾಸಿ ಮತ್ತು ಮುಘಲ್ ಸರಾಯ್ ನಲ್ಲಿರುವ ಬಾಡಿಗೆ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಸಿಆರ್'ಪಿಎಫ್ ಘಟಕ ಸ್ಥಾಪನೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ಬಳಿಕ ಸಿಆರ್'ಪಿಎಪ್ ಪಡೆಯನ್ನು ಹೊಸ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತದೆ.
ಬೆಂಗಳೂರಿನ ರಾಜನುಕುಂಟೆ ಸಮೀಪದ ತರಳು ಗ್ರಾಮದ 220 ಎಕರೆಯಷ್ಟು ವಿಸ್ತಾರವಾದ ಪ್ರದೇಶದಲ್ಲಿ ಸಿಆರ್'ಪಿಎಫ್ ಘಟಕವನ್ನು ಸ್ಥಾಪಿಸಲಾಗಿದೆ. ಈ ಘಟಕ ಸಿಆರ್'ಪಿಎಫ್'ನ ಶ್ವಾನ ತಳಿ ಅಭಿವೃದ್ಧಿ ಹಾಗೂ ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ.
3 ಲಕ್ಷ ಸಿಬ್ಬಂದಿಯ ಪ್ರಬಲ ಪಡೆಯನ್ನು ಹೊಂದಿರುವ ಸಿಆರ್'ಪಿಎಫ್, ದೇಶದ ಅತಿ ದೊಡ್ಡ ಅರೆ ಮಿಲಿಟರಿ ಪಡೆಯಾಗಿದೆ. ನಕ್ಸಲ್ ನಿಗೃಹ ಕಾರ್ಯಾಚರಣೆ ಹಾಗೂ ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ.
ಉತ್ತರಪ್ರದೇಶದಲ್ಲಿ ಈಗಾಗಲೇ 5 ಸಿಆರ್'ಪಿಎಫ್ ಕೇಂದ್ರಗಳಿವೆ. ಲಖನೌ, ಅಲಹಾಬಾದ್, ರಾಂಪುರ, ಅಮೇಥಿ ಹಾಗೂ ನೊಯ್ಡಾದಲ್ಲಿ ಸಿಆರ್'ಪಿಎಫ್ ಕೇಂದ್ರಗಳಿವೆ. ಇದೀಗ ಮತ್ತೊಂದು ಕೇಂದ್ರವನ್ನು ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕೇಂದ್ರದ ಈ ನಿರ್ಧಾರದಲ್ಲಿ ಯಾವುದೇ ರೀತಿಯ ಅರ್ಥವಿಲ್ಲ. ಕೇಂದ್ರ ಈ ನಿರ್ಧಾರಕ್ಕೆ ಯಾವುದೇ ಸ್ಪಷ್ಟನೆಗಳೂ ಇಲ್ಲ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಹೇಳಿದ್ದಾರೆ.
ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, ತರಳು ಗ್ರಾಮದಿಂದ ಸಿಆರ್'ಪಿಎಫ್ ಪ್ರಧಾನ ಕಚೇರಿಯನ್ನು ಸ್ಥಳಾಂತರ ಮಾಡುವ ನಿರ್ಧಾರವನ್ನು ಕೂಡಲೇ ರದ್ದು ಮಾಡುವಂತೆ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


