ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನ ಮಂತ್ರಿ
63ನೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...

ನವದೆಹಲಿ: 63ನೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.
‘ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ’ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆ ನೀಡಿದೆ. ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


