ಬಿಜೆಪಿ ದೂರಿನ ಹೊರತಾಗಿಯೂ ನಿಗದಿಯಂತೆ ಉಪಚುನಾವಣೆ
ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ ನಡೆಯಲಿದೆ.

ಬೆಂಗಳೂರು: ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ ನಡೆಯಲಿದೆ.
ರಾಮನಗರ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರೂ ಎಲ್ಲಾ ಐದು ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಸಲ್ಲಿಸಿರುವ ಬೇಡಿಕೆಯನ್ನು ರಾಜ್ಯ ಚುನಾವಣಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವಂತೆ ಇದಕ್ಕೆ ಕಾನೂನಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ, ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ. ಏನು ಮಾಡಬಹುದು ಎಂದು ಚುನಾವಣಾ ಆಯೋಗ ತಿಳಿಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ರಾಮನಗರ ಉಪಚುನಾವಣೆ ಮುಂದೂಡುವಂತೆ ಒತ್ತಾಯಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


