ಲೈಂಗಿಕ ಕಿರುಕುಳ ಪ್ರಕರಣ: ಅರ್ಜುನ್ ಸರ್ಜಾ ಬಂಧಿಸದಂತೆ ಹೈಕೋರ್ಟ್ ಆದೇಶ
ನಟಿ ಶ್ರುತಿ ಹರಿಹರನ್ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅರ್ಜುನ್....

Published On :
ಬೆಂಗಳೂರು: ನಟಿ ಶ್ರುತಿ ಹರಿಹರನ್ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅರ್ಜುನ್ ಸರ್ಜಾ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ಆದೇಶಿಸಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜುನ್ ಸರ್ಜಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು, ಮುಂದಿನ ವಿಚಾರಣೆಯವರೆಗೆ ಆರೋಪಿಯನ್ನು ಬಂಧಿಸಿದಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಶ್ರುತಿ ಹರಿಹರನ್ ಪರ ವಕೀಲ ಬಾಲನ್ ಹಾಗೂ ಅರ್ಜುನ್ ಸರ್ಜಾ ಪರ ವಕೀಲ ಬಿವಿ ಆಚಾರ್ಯ ಅವರ ವಿಸ್ತೃತ ವಾದ ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ, ಅರ್ಜಿಯ ವಿಚಾರಣೆಯನ್ನು ನವೆಂಬರ್ 14 ಕ್ಕೆ ಮುಂದೂಡಿದೆ.
ಮೂರು ವರ್ಷ ಕಾಲ ಹಳೆಯ ಪ್ರಕರಣ ಇದಾಗಿರುವ ಕಾರಣ ವಿಚಾರಣೆ ಮುಗಿಯುವವರೆಗೆ ಯಾರನ್ನೂ ಬಂಧಿಸಬಾರದು ಎಂದು ನ್ಯಾಯಾಲಯವು ಮಧ್ಯಂತರ ಆದೇಶ ನೀಡಿದೆ. ಆದರೆ ತನಿಖೆಗೆ ತಡೆ ನೀಡಲು ನಿರಾಕರಿಸಿದೆ. ಪ್ರಕರಣದಲ್ಲಿ ಯಾವುದೇ ತರಾತುರಿ ಬೇಡ ಎಂದು ಹೈಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


