ವಿದ್ಯಾರ್ಥಿಗಳ ಬ್ಯಾಕ್ ಲಾಗ್ ತೆರವಿಗೆ 2 ಹೆಚ್ಚುವರಿ ಅವಕಾಶ ನೀಡಿದ ವಿಟಿಯು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು) ಬೆಳಗಾವಿ, 2003 ರಿಂದ 2009 ರವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಬ್ಯಾಚ್ ಲಾಗ್ ಗಳನ್ನು ತೆರವುಗೊಳಿಸಿ....

Published On :
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು) ಬೆಳಗಾವಿ, 2003 ರಿಂದ 2009 ರವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಬ್ಯಾಚ್ ಲಾಗ್ ಗಳನ್ನು ತೆರವುಗೊಳಿಸಿಕೊಳ್ಳುವ ಸಲುವಾಗಿ ಮತ್ತೆ ಎರಡು ಹೆಚ್ಚುವರಿ ಅವಕಾಶವನ್ನು ನೀಡಲು ನಿರ್ಧರಿಸಿದೆ.
ವಿದ್ಯಾರ್ಥಿ ಸಮುದಾಯದ ಕೋರಿಕೆಗಳನ್ನು ಪರಿಗಣಿಸಿ, ವಿಶ್ವವಿದ್ಯಾನಿಲಯವು ಡಿಸೆಂಬರ್ 2018 ರಿಂದ ಜನವರಿ 2019 ರವರೆಗೆ ನಡೆಯುವ ಪರೀಕ್ಷೆಗಳಲ್ಲಿ ಇಂತಹಾ ವಿದ್ಯಾರ್ಥಿಗಳು ತಾವು ಉಳಿಸಿಕೊಂಡಿರುವ ವಿಷಯದ ಪರೀಕ್ಷೆ ತೆಗೆದುಕೊಂಡು ತೇರ್ಗಡೆ ಹೊಂದಲು ಅವಕಾಶ ಕಲ್ಪಿಸಿಕೊಡಲು ವಿಟಿಯು ನ ವಿಶೇಷ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
2003 ರಿಂದ 2009 ರವರೆಗೆ ಬಿಇ ಅಥವಾ ಬಿಟೆಕ್ ಮಾಡಿರುವ 2012-2015 ರ ನಡುವೆ ಎಂಬಿಎ ಅಥವಾ ಎಂಟೆಕ್ ಓದಿರುವ ವಿದ್ಯಾರ್ಥಿಗಳು ಯಾರಾದರೂ ಕೆಲ ವಿಷಯಗಳಲ್ಲಿ ಬ್ಯಾಕ್ ಲಾಗ್ ಇಟ್ಟುಕೊಂಡಲ್ಲಿ ಅಂತಹವರಿಗೆ ಈ ನಿರ್ಣಯದಿಂದ ಅನುಕೂಲವಾಗಲಿದೆ.
"ನಾವು ವಿದ್ಯಾರ್ಥಿಗಳಿಂದ ಬಂದ ಬೇಡಿಕೆ ಆಧರಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ.ಎಕ್ಸಿಕ್ಯುಟಿವ್ ಕೌನ್ಸಿಲ್ ಕೂಡಾ ಅದನ್ನು ಒಪ್ಪಿಕೊಳ್ಳುತ್ತದೆ ಮತ್ತು ಈ ವಿದ್ಯಾರ್ಥಿಗಳಿಗೆ ಎರಡು ಅವಕಾಶಗಳನ್ನು ನೀಡಲಾಗುತ್ತದೆ. ಎಂದು ವಿಟಿಯು ಅಧಿಕೃತ ಮೂಲಗಳು ತಿಳಿಸಿದೆ. ಆದರೆ ಇದಾಗಲೇ ಎಲ್ಲಾ ವಿಷಯಗಳನ್ನು ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಇದು ಯಾವ ಬಗೆಯಲ್ಲಿಯೂ ಅನ್ವಯವಾಗುವುದಿಲ್ಲ.
"ಅಗತ್ಯವಿರುವ ಹಾಜರಾತಿ ಇಲ್ಲದಿರುವ ಅಥವಾ ಆಂತರಿಕ ಪರೀಕ್ಷೆ (ಇಂಟರ್ನಲ್ ಟೆಸ್ಟ್) ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲವೆಂದು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ, ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
VTUವಿಟಿಯುVisvesvaraya Technological Universitybacklogಬ್ಯಾಕ್ ಲಾಗ್ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


