ನ.10ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ನಿರ್ಧಾರ: ಸಚಿವೆ ಜಯಮಾಲಾ
ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ...

Published On :
ಬೆಂಗಳೂರು: ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಶನಿವಾರ ಹೇಳಿದ್ದಾರೆ.
ಇಂದು ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯಮಾಲಾ, ಟಿಪ್ಪು ಜಯಂತಿ ಆಚರಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ನಿರ್ಧರಿಸಿದ್ದಾರೆ ಮತ್ತು ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಏನಾದರೂ ಅನಾಹುತವಾದರೆ ಅದಕ್ಕೆ ಬಿಜೆಪಿಯವರೇ ಹೊಣೆ ಎಂದರು.
ನಿನ್ನೆಯಷ್ಟೆ ಟಿಪ್ಪು ಜಯಂತಿ ಆಚರಣೆ ಹಿಂದಿನ ಸರ್ಕಾರದಿಂದ ಆರಂಭವಾಗಿದ್ದು, ಈ ವರ್ಷವೂ ಅದು ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು.
ಟಿಪ್ಪು ಜಯಂತಿ ಆಚರಣೆ ಕೈಬಿಡಬೇಕೆಂದು ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮುಖಂಡರು ಸರ್ಕಾರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ ಈಗ ಜಯಂತಿ ಆಚರಣೆ ಮುಂದುವರಿಯಲಿದೆ ಎಂದು ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


