ಬೆಂಗಳೂರು: ಕೆಪಿಎಸ್ ಸಿ ಕಚೇರಿಯಲ್ಲಿ ಸಹೋದ್ಯೋಗಿ ಮೇಲೆ ಮಚ್ಚಿನೇಟು!
ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಪಕ್ಕದಲ್ಲಿಯೇ ಇರುವ ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ವಿಧಾನಸೌಧ ಪೊಲೀಸರು ನಟರಾಜನನ್ನು ಬಂಧಿಸಿದ್ದಾರೆ.
ಇತ್ತೀಚಿಗೆ ಪತ್ನಿಗೆ ವಿಚ್ಚೇದನ ನೀಡಿದ ನಟರಾಜ್ ಜಯಲಕ್ಷ್ಮಿ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದ. ಇದನ್ನೆ ನೆಪ ಮಾಡಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿ ಮದುವೆಯಾಗುವಂತೆ ಪ್ರಸ್ತಾಪಿಸಿದ್ದಾನೆ. ಜಯಲಕ್ಷ್ಮಿಗೆ ಮದುವೆಯಾಗಿ, ಒಬ್ಬ ಪುತ್ರನಿದ್ದು, ಆತನೊಂದಿಗೆ ಸಂಬಂಧ ಹೊಂದಲು ಆಸಕ್ತಿ ಇಲ್ಲದೆ ಅಂತರ ಕಾಯ್ದುಕೊಂಡಿದ್ದರು .
ಇದರಿಂದ ಆಕ್ರೋಶಗೊಂಡ ನಟರಾಜ್ ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಜಯಲಕ್ಷ್ಮಿ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ರಾಮು ಎಂಬ ನೌಕರನ ಮೇಲೂ ಹಲ್ಲೆ ನಡೆಸಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿರುವ ವಿಧಾನಸೌಧ ಪೊಲೀಸರು ಗಾಯಾಗಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಆರೋಪಿ ನಟರಾಜ್ ನನ್ನು ಬಂಧಿಸಿದ್ದಾರೆ.
ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


