ರಾಜ್ಯ

ಸಮ್ಮಿಶ್ರ ಸರ್ಕಾರದ ಸ್ಥಿರತೆಗೆ ಕಾರಣವಾಗುತ್ತಾ ಉಪಚುನಾವಣೆ?

ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಉಪ ಚುನಾವಣೆ ಹಾಗೂ ಜಮಖಂಡಿ ರಾಮನಗರ ವಿಧಾನಸಭಾ ಉಪಚುನಾವಣೆ 2019 ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ.

ಸಮ್ಮಿಶ್ರ ಸರ್ಕಾರದ ಸ್ಥಿರತೆಗೆ ಕಾರಣವಾಗುತ್ತಾ ಉಪಚುನಾವಣೆ?
Will bypoll result ensure stability of government?
Published On :
ಬೆಂಗಳೂರು: ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಉಪ ಚುನಾವಣೆ ಹಾಗೂ ಜಮಖಂಡಿ ರಾಮನಗರ ವಿಧಾನಸಭಾ ಉಪಚುನಾವಣೆ 2019 ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ. ಆದರೆ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎನ್ನುವುದಕ್ಕಿಂತ ಹೆಚ್ಚಾಗಿ ಈ ಉಪಚುನಾವಣೆಗಳು ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದ ಸ್ಥಿರತೆಯನ್ನು ನಿರ್ಧರಿಸಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆದ್ದರೆ ಸಮ್ಮಿಶ್ರ ಸರ್ಕಾರ ಮತ್ತಷ್ಟು ಸ್ಥಿರವಾಗುವುದರ ಜೊತೆಗೆ ಶಿವಮೊಗ್ಗದಲ್ಲಿ ಜೆಡಿಎಸ್ ನ ನೆಲೆ ಭದ್ರಗೊಳ್ಳುವುದಕ್ಕೂ ಸಾಧ್ಯವಾಗಲಿದೆ.  ಈ ಕಾರಣಕ್ಕಾಗಿಯೆ ಹೆಚ್ ಡಿ ಕುಮಾರಸ್ವಾಮಿ ಸಹ ಕ್ಷೇತ್ರದಲ್ಲಿ ಹೆಚ್ಚಿನ ಪ್ರಚಾರ ಮಾಡಿದ್ದು, ಮಧು ಬಂಗಾರಪ್ಪ ಗೆದ್ದರೆ ಅದು ಯಡಿಯೂರಪ್ಪ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಅವರ ಗೆಲುವಾಗಿರಲಿದೆ ಎಂದು ಹೇಳಲಾಗುತ್ತಿದೆ.  ಇನ್ನು ಒಂದು ವೇಳೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆದ್ದರೆ ಪಕ್ಷದಲ್ಲಿ ಈಗಾಗಲೇ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪ ಮತ್ತಷ್ಟು ಬಲಶಾಲಿಯಾಗುತ್ತಾರೆ.  ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗಿಂತಲೂ ಈ ಉಪಚುನಾವಣೆಗಳು ರಾಜ್ಯ ಸರ್ಕಾರದ ಸ್ಥಿರತೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.