ರಾಜ್ಯ

ಬಳ್ಳಾರಿಯಲ್ಲಿ ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ, ಶ್ರೀರಾಮುಲು ಅಣ್ಣನಿಗೆ ಧನ್ಯವಾದ: ಡಿಕೆ ಶಿವಕುಮಾರ್ ಟಾಂಗ್

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಹಿಂದೊಮ್ಮೆ ತನ್ನ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಾಂಗ್ರೆಸ್ ಬಿಜೆಪಿಯಿಂದ ಕಸಿದುಕೊಳ್ಳುವುದರಲ್ಲಿ ಯಶಸ್ವಿಯಾಗಿದೆ.

ಬಳ್ಳಾರಿಯಲ್ಲಿ ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ, ಶ್ರೀರಾಮುಲು ಅಣ್ಣನಿಗೆ ಧನ್ಯವಾದ: ಡಿಕೆ ಶಿವಕುಮಾರ್ ಟಾಂಗ್
ಡಿಕೆ ಶಿವಕುಮಾರ್
Published On :
ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಹಿಂದೊಮ್ಮೆ ತನ್ನ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಾಂಗ್ರೆಸ್  ಬಿಜೆಪಿಯಿಂದ ಕಸಿದುಕೊಳ್ಳುವುದರಲ್ಲಿ ಯಶಸ್ವಿಯಾಗಿದೆ. 
ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಉಸ್ತುವಾರಿ ವಹಿಸಿಕೊಂಡಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಬಲಶಾಲಿಯಾಗಿದ್ದಾರೆ. 
ಉಪಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಉಗ್ರಪ್ಪ ಅವರ ಗೆಲುವಿನ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಡಿ.ಕೆ ಶಿವಕುಮಾರ್ ಬಳ್ಳಾರಿಯಲ್ಲಿ ಶಾಂತಿಯುತ ಮತದಾನ ನಡೆದಿದೆ. ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಕ್ಕೆ ಕ್ಷೇತ್ರದ ಜನತೆಗೆ ಹಾಗೂ ಮೂವರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ, ಮೊದಲನೆಯದಾಗಿ ಶ್ರೀರಾಮುಲು ಅಣ್ಣನಿಗೆ ಧನ್ಯವಾದ ತಿಳಿಸುತ್ತೇನೆ. 
ಎಲ್ಲರೂ ಒಮ್ಮೆ ಸೋಲುತ್ತಾರೆ, ಒಮ್ಮೆ ಗೆಲ್ಲುತ್ತಾರೆ. ನಾವು ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ. ನಾವು ಬಾಂಬ್ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯತ್ತ ಗಮನ ನೀಡುತ್ತೇವೆ, ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ. ಚುನಾವಣೆಗೆ ಪಕ್ಷ ಭೇದ  ಮರೆತು ಸಹಕರಿಸಿದ ಬಿಜೆಪಿ ಕಾರ್ಯಕರ್ತರಿಗೆ   ನಮನ ಸಲ್ಲಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 
ಇದೇ ವೇಳೆ ಉಪಚುನಾವಣೆ ನಂತರ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ಪತನವಾಗಲಿದೆ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಹೇಳಿದ್ದ ಮಾಜಿ ಸಿಎಂ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಉಪಚುನಾವಣೆ ಮುಗಿದಿದೆ, ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬರುವ ಶುಭಮುಹೂರ್ತವನ್ನು ಎದುರುನೋಡುತ್ತಿದ್ದೇವೆ ಎಂದು ವ್ಯಂಗ್ಯವಾಗಿ ನುಡಿದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.