ಅಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಕೇಸ್: ರೆಡ್ಡಿ ಆಪ್ತ ಆಲಿಖಾನ್ ಗೆ ನಿರೀಕ್ಷಣಾ ಜಾಮೀನು
: ಅಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಆಪ್ತ ಅಲಿಖಾನ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ..,.

Published On :
ಬೆಂಗಳೂರು: ಅಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಆಪ್ತ ಅಲಿಖಾನ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ನಗರದ 61ನೇ ಸೆಷನ್ಸ್ ನ್ಯಾಯಾಲಯ ಅಲಿಖಾನ್ ಗೆ ಷರತ್ತು ಬದ್ದ ಮಧ್ಯಂತರ ಜಾಮೀನು ನೀಡಿದೆ, ಒಬ್ಬರ ಶ್ಯೂರಿಟಿ ಹಾಗೂ 50 ಸಾವಿರ ರು. ಬಾಂಡ್ ಪಡೆದು ಜಾಮೀನು ನೀಡಲಾಗಿದೆ,
ಮಾಜಿ ಸಚಿವ ಜನಾರ್ಧನ ರೆಡ್ಡಿ ಬಂಧನಕ್ಕೆ ಹೈದರಾಬಾದ್ ಗೆ ಸಿಸಿಬಿ ಡಿಸಿಪಿ ಗಿರೀಶ್ ನೇತೃತ್ವದ ತಂಡ ತೆರಳಿದೆ, ಅಲ್ಲಿ ಶೋಧ ನಡೆಸಿರುವ ಸಿಸಿಬಿ ತಂಡ ಸಹಕಾರ ನೀಡುವಂತೆ ತೆಲಂಗಾಣ ಪೊಲೀಸರನ್ನು ಕೋರಿದೆ.
ಮಾರ್ಕೆಟಿಂಗ್ ಹೆಸರಲ್ಲಿ ಹಣ ದ್ವಿಗುಣ ಮಾಡುವುದಾಗಿ ಲಕ್ಷಾಂತರ ಜನರಿಗೆ ಬೆಂಗಳೂರಿನ ಅಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ವಂಚನೆ ಮಾಡಿತ್ತು. ಈ ಸಂಬಂಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Janardhana Reddyಜನಾರ್ಧನ ರೆಡ್ಡಿನಿರೀಕ್ಷಣಾ ಜಾಮೀನುinterim bailAli khanAmbident Company Deal Caseಅಲಿಖಾನ್ಅಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಕೇಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


