ಬೆಂಗಳೂರು: ನಗರದ ಪ್ರಮುಖ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನ!
ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.

ಬೆಂಗಳೂರು: ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.
ಒಂದು ತಿಂಗಳ ಕಾಲ ನಗರದ ಪ್ರಮುಖ ಶಾಪಿಂಗ್ ಮಾಲ್ ಗಳಲ್ಲಿ ಈ ಅಭಿಯಾನ ನಡೆಯಲಿದ್ದು, ಗರುಡಾ ಮಾಲ್ ನಲ್ಲಿ ಅಂಚೆ ಪೆಟ್ಟಿಗೆ ರೀತಿಯಲ್ಲಿ ಪೆಟ್ಟಿಗೆಯೊಂದನ್ನು ಇಡಲಾಗಿದೆ. ಇದರಲ್ಲಿ ಆಸಕ್ತರು ಪುಸ್ತಕ ದಾನ ಮಾಡಬಹುದಾಗಿದೆ.
ಓದುವ ಹವ್ಯಾಸವನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕ ಗ್ರಂಥಾಲಯದ ಅಸ್ತಿತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನ ಆರಂಭಿಸಲಾಗಿದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್ ಹೊಸಮನಿ, ಯಾವುದೇ ಭಾಷೆಯಲ್ಲಿನ ಪುಸ್ತಕಗಳನ್ನು ಎಷ್ಟು ಬೇಕಾದರೂ ದಾನ ಮಾಡಬಹುದು ಎಂದರು.
ನವೆಂಬರ್ 5 ರಿಂದ ಗರುಡಾ ಮಾಲ್ ನಲ್ಲಿ, ನ. 9 ರಿಂದ ಗೋಪಾಲನ್ ಅರ್ಕೇಡಾ ಮಾಲ್, ನ.13 ರಿಂದ ಮಂತ್ರಿ ಸ್ಕ್ವೇರ್ ಮಾಲ್, ನ.15 ರಿಂದ ಪೋರ್ ಮಾಲ್ ನಲ್ಲಿ ಅಭಿಯಾನ ಆರಂಭವಾಗಲಿದೆ.
ಇಲ್ಲಿಯೇ ಸದಸ್ಯತ್ವ ನೋಂದಣಿ ಸಹ ಆರಂಭಿಸಲಾಗುತ್ತಿದ್ದು, 100 ರೂ. ಪಾವತಿಸಿ ಅರ್ಜಿ ಭರ್ತಿ ಮಾಡುವ ಮೂಲಕ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸದಸ್ಯರಾಗಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


