ರಾಜ್ಯ

ದೀಪಾವಳಿ ಸಂಭ್ರಮ: 3 ದಿನಗಳಲ್ಲಿ 55 ಜನರಿಗೆ ಗಾಯ

ದೀಪಾವಳಿ ಸಂಭ್ರಮಾಚರಣೆಯಲ್ಲಿ ಸಿಡಿದ ಪಟಾಕಿಯಿಂದ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ ಮೂರು ದಿನಗಳಲ್ಲಿ ನಗರದಲ್ಲಿ 55 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...

ದೀಪಾವಳಿ ಸಂಭ್ರಮ: 3 ದಿನಗಳಲ್ಲಿ 55 ಜನರಿಗೆ ಗಾಯ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
Published On :
ಬೆಂಗಳೂರು: ದೀಪಾವಳಿ ಸಂಭ್ರಮಾಚರಣೆಯಲ್ಲಿ ಸಿಡಿದ ಪಟಾಕಿಯಿಂದ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ ಮೂರು ದಿನಗಳಲ್ಲಿ ನಗರದಲ್ಲಿ 55 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 
ಬುಧವಾರದವರೆಗೆ 20 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಇಬ್ಬರು ಮಕ್ಕಳು ದೃಷ್ಟಿ ಕಳೆದುಕೊಂಡಿದ್ದಾರೆ. ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಸಿಡಿದ ಪಟಾಕಿಗಳಿಂದ ಭಾರಿ ಪ್ರಮಾಣದಲ್ಲಿ ಪಟಾಕಿ ಅನಾಹುತಗಳು ಸಂಭವಿಸಿದ್ದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚಿ ಮಂದಿ ಗಾಯಗೊಂಡಿದ್ದಾರೆ. ಒಟ್ಟಾರೆ ನ.6 ರಿಂದ 8ರವರೆಗೆ 55 ಮಂದಿ ಕಣ್ಣಿನ ಗಾಯ ಪ್ರಕರಣಗಳು ವರದಿಯಾಗಿದ್ದು, 7 ಪ್ರಕರಣ ಗಂಭೀರವಾಗಿದೆ. ಇದರಲ್ಲಿ ಇಬ್ಬರು ಈಗಾಗಲೇ ದೃಷ್ಟಿ ಕಳೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 26 ಇವರಲ್ಲಿ ಇಬ್ಬರು ದೃಷ್ಟಿ ಕಳೆದುಕೊಂಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 30, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 4, ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ 3, ನೇತ್ರಧಾಮ ಕಣ್ಣಿನ ಆಸ್ಪತ್ರೆಯಲ್ಲಿ 3 ಸೇರಿದಂತೆ ನಗರದ ವಿವಿಧ ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ ಗಾಯಗಳಾಗಿ ಹೊರರೋಗಿಗಳಾಗಿ ಸೇವೆ ಪಡೆದಿದ್ದಾರೆ. 
ನೆರೆಮನೆ ಅಂಗಡಿಯವರು ಉಡುಗೊರೆಯಾಗಿ ನೀಡಿದ್ದ ಪಟಾಕಿಗಳನ್ನು ಸಿಡಿಸಿದ್ದ ಮೌನೇಶ್ ಹಾಗೂ ವಸುನಾಥ್ ಎಂಬುವವರು ಗಾಯಗೊಂಡಿದ್ದಾರೆ. ಮೌನೇಶ್ ಅವರ ಕಣ್ಣುಗಳಿಗೆ ಗಾಯವಾಗಿದ್ದು, ವಸುನಾಥ್ ಅವರ ಕೈಗಳಿಗೆ ಗಾಯವಾಗಿದೆ. ಪ್ರಸ್ತುತ ಇಬ್ಬರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಬನಶಂಕರಿ ನಿವಾಸಿಯಾಗಿರುವ ಅಭಿಷೇಕ್ ರಜಪೂತ್ ಎಂಬುವವರು ನೆರೆಮನೆಯವರು ಸಿಡಿಸುತ್ತಿದ್ದ ಪಟಾಕಿ ನೋಡುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.