ರಾಜ್ಯ

ಆ್ಯಂಬಿಡೆಂಟ್ ವಂಚನೆ ಪ್ರಕರಣ: ತಡರಾತ್ರಿವರೆಗೂ ಸಿಸಿಬಿಯಿಂದ ರೆಡ್ಡಿ ವಿಚಾರಣೆ

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಕಚೇರಿ ಮುಂದೆ ಹಾಜರಾದ ಮಾಜಿ ಸಚಿವ ಜನಾರ್ಧನ ರೆಡ್ಡಿಯವರನ್ನು ಪೊಲೀಸರು ತಡರಾತ್ರವರೆಗೂ ವಿಚಾರಣೆಗೊಳಪಡಿಸಿದ್ದಾರೆ...

ಆ್ಯಂಬಿಡೆಂಟ್ ವಂಚನೆ ಪ್ರಕರಣ: ತಡರಾತ್ರಿವರೆಗೂ ಸಿಸಿಬಿಯಿಂದ ರೆಡ್ಡಿ ವಿಚಾರಣೆ
ಜನಾರ್ಧನ ರೆಡ್ಡಿ
Published On :
ಬೆಂಗಳೂರು: ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಕಚೇರಿ ಮುಂದೆ ಹಾಜರಾದ ಮಾಜಿ ಸಚಿವ ಜನಾರ್ಧನ ರೆಡ್ಡಿಯವರನ್ನು ಪೊಲೀಸರು ತಡರಾತ್ರವರೆಗೂ ವಿಚಾರಣೆಗೊಳಪಡಿಸಿದ್ದಾರೆ. 
ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾದ ರೆಡ್ಡಿ ಹಾಗೂ ಪ್ರಕರಣದ ಪ್ರಮುಖ ಆರೋಪಿಗಳಾದ ಆ್ಯಂಬಿಡೆಂಟ್ ಕಂಪನಿ ಮಾಲೀಕ ಸೈಯದ್ ಅಹಮ್ಮದ್ ಫರೀದ್ ಮತ್ತು ರೆಡ್ಡಿ ಆಪ್ತ ಸಹಾಯಕ ಅಲಿಖಾನ್ ಅವರನ್ನು ಸಿಸಿಬಿ ಪೊಲೀಸರು ತಡರಾತ್ರಿವರೆಗೂ ವಿಚಾರಣೆಗೊಳಪಡಿಸಿದರು. ನಂತರ ಬಿಡುಗಡೆ ಮಾಡಿದರು. ಆದರೆ, ರೆಡ್ಡಿ ಮತ್ತು ಫರೀದ್ ಅವರ ಬಂಧನ ಅಥವಾ ಬಿಡುಗಡೆಯ ಬಗ್ಗೆ ಅಧಿಕಾರಿಗಳು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. 
ಪ್ರಕರಣ ಸಂಬಂಧ ಸಿಸಿಬಿ ಮುಂದೆ ಹಾಜರಾಗುವಂತೆ ಶುಕ್ರವಾರ ನ್ಯಾಯಾಲಯ ನೀಡಿದ್ದ ಖಡಕ್ ಸೂಚನೆಗೆ ಶಿರಬಾಗಿದ ರೆಡ್ಡಿ, ತಮ್ಮ ವಕೀಲ ಚಂದ್ರಶೇಖರ್ ಕಾರಿನಲ್ಲೇ ಆಗಮಿಸಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಜನಾರ್ಧನ ರೆಡ್ಡಿ ಹಾಗೂ ಅಲಿಖಾನ್ ಗಾಗಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಿಸಿಬಿ ಹಗಲಿರುಳು ಶೋಧ ನಡೆಸಿತ್ತು. 
ಸಿಸಿಬಿ ಕಚೇರಿಯಲ್ಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಡಿಸಿಪಿ ಎಸ್ ಗಿರೀಶ್ ಹಾಗೂ ಪ್ರಕರಣದ ತನಿಖಾಧಿಕಾರಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರು ಪ್ರಕರಣ ಸಂಬಂಧ ಜನಾರ್ಧನ ರೆಡ್ಡಿ ಹಾಗೂ ಆ್ಯಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಅವರನ್ನು ಮುಖಾಮುಖಿಯಾಗಿ ವಿಚಾರಣೆ ನಡೆಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.