ಅನಂತ್ ಕುಮಾರ್ ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಹು ಅಂಗಾಂಗ ವೈಫಲ್ಯದಿಂದಾಗಿ ಸೋಮವಾರ ಬೆಳಗ್ಗೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರಿಗೆ ಪ್ರಧಾನಿ...

Published On :
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದಾಗಿ ಸೋಮವಾರ ಬೆಳಗ್ಗೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು.
ವಿಶೇಷ ವಿಮಾನದ ಮೂಲಕ ಇಂದು ರಾತ್ರಿ 8.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬರಮಾಡಿಕೊಂಡರು.
ಬಳಿಕ ನೇರವಾಗಿ ಬಸವನಗುಡಿಯಲ್ಲಿರುವ ಅನಂತ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ತಮ್ಮ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಅನಂತ್ ಕುಮಾರ್ ಅವರ ಕುಟುಂಬಕ್ಕೆ ಪ್ರಧಾನಿ ಮೋದಿ ಸಾಂತ್ವನ ಹೇಳಿದರು. ನಂತರ ನವದೆಹಲಿಗೆ ವಾಪಸಾಗಿದ್ದಾರೆ.
ನಾಳೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


