ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ
ಕ್ಯಾನ್ಸರ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ...

ಬೆಂಗಳೂರು: ಕ್ಯಾನ್ಸರ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ಕುಮಾರ್ ನಿಧನ ಗೌರವಾರ್ಥ ರಾಜ್ಯ ಸರ್ಕಾರ ಸೋಮವಾರ ಎಲ್ಲಾ ಸರ್ಕಾರಿ ಕಚೇರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಮಾಡಲಾಗುವುದು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು ಇರುವುದಿಲ್ಲ. ಯಾವುದೇ ರೀತಿಯ ಅಧಿಕೃತ ಮನರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ. ಸರ್ಕಾರಿ ಕಟ್ಟಡಗಳ ಮೇಲೆ ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಾಟ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಮೈಸೂರಿನಿಂದ ಹೊರಟು ನೇರವಾಗಿ ಅನಂತ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ.
ಅನಂತ್ ಕುಮಾರ್ ನಿಧನಕ್ಕೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜಕಾಣ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.ಮೌಲ್ಯಾಧಾರಿತ ರಾಜಕಾರಣದಲ್ಲಿ ನಂಬಿಕೆಯಿಟ್ಟಿದ್ದ ಅವರು ಸಂಸದರಾಗಿ, ಕೇಂದ್ರ ಸಚಿವರಾಗಿ ದೇಶಕ್ಕೆ ನೀಡಿದ ಕೊಡುಗೆ ಆನನ್ಯವಾದದ್ದು. ತಮ್ಮ ಜನಪರ ಕಾಳಜಿ, ಕಾರ್ಯಚಟುವಟಿಕೆಗಳಿಂದಾಗಿ ಬೆಂಗಳೂರಿಗರ ಕಣ್ಮಣಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


