ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ
ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ...

ಬೆಂಗಳೂರು: ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ ಚಿಕಿತ್ಸೆಗೆ ಕಳೆದ ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ. ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಖಾಸಗಿ ಆಸ್ಪತ್ರೆಯಿಂದ ಇದೀಗ ಅವರ ನಿವಾಸ ಬಸವನಗುಡಿಯಲ್ಲಿರುವ ಸುಮೇರ ನಿವಾಸದಲ್ಲಿರಿಸಲಾಗಿದೆ. ಅವರ ಬಂಧು-ಮಿತ್ರರು ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗೆ 9 ಗಂಟೆ ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ವಿಭಾಗ ಪೊಲೀಸರಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


