ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಕಾಲೇಜುಗಳು ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್
ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ವ್ಯಕ್ತಿ ಅಥವಾ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮೂಲಕ ದಾಖಲೆಗಳು ಸಿಗದೆ ಪರಿತಪಿಸುತ್ತಿದ್ದ ವೈದ್ಯರಿಗೆ ನ್ಯಾಯಾಲಯ ದೊಡ್ಡ ನಿರಾಳವನ್ನು ನೀಡಿದೆ...

Published On :
ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ವ್ಯಕ್ತಿ ಅಥವಾ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮೂಲಕ ದಾಖಲೆಗಳು ಸಿಗದೆ ಪರಿತಪಿಸುತ್ತಿದ್ದ ವೈದ್ಯರಿಗೆ ನ್ಯಾಯಾಲಯ ದೊಡ್ಡ ನಿರಾಳವನ್ನು ನೀಡಿದೆ.
ಬಳ್ಳಾರಿಯ ಹೈದೆರಿ ಮಂಜಿಲ್ ಮೂಲಕ ಡಾ.ಟಿ.ಕೆ ರೇಷ್ಮಾ ಎಂಬುವವರು ನ್ಯಾಯಾಲಯದಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ್ದರು. ಬಳ್ಳಾರಿಯ ವಿಜಯನಗರ ಇನ್ಸ್ಟ್ರಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿಗೆ ಸೇರ್ಪಡೆಗೊಳ್ಳುವ ವೇಳೆ ಸಲ್ಲಿಸಲಾಗಿದ್ದ ಮೂಲ ದಾಖಲೆಗಳನ್ನು ಹಿಂತಿರುಗಿಸುವಂತೆ ಸೂಚನೆ ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಕಂಡಿದ್ದರು.
ಪದವಿ ಪೂರ್ಣಗೊಳಿಸಿದ ಬಳಿಕ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕಿದ್ದು, ಈ ಹಿನ್ನೆಲೆಯಲ್ಲಿ ದಾಖಲೆಗಳನ್ನು ಕಾಲೇಜು ತಡೆದಿದೆ. ಆದರೆ, ಯಾವ ಆಧಾರದ ಮೇಲೆ ಮೂಲ ದಾಖಲೆಗಳನ್ನು ತಡೆದಿದೆ ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಲಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಅರ್ಜಿದಾರರಿಗೆ ಹಾಗೂ ನಾಗರೀಕರಿಗೆ ಮುಂದಿನ ಭವಿಷ್ಯಕ್ಕಾಗಿ, ಉದ್ಯೋಗಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ಅತ್ಯಂತ ಮುಖ್ಯವಾಗಿರುತ್ತದೆ. ದಾಖಲೆಗಳನ್ನು ತಡೆಹಿಡಿಯಲು ಕಾನೂನಿನ ಅಗತ್ಯವಿದೆ. ಆದರೆ, ಅಂತಹ ಕಾನೂನುಗಳು ಯಾವುದನ್ನೂ ಸಂಸ್ಥೆ ತೋರಿಸಿಲ್ಲ ಎಂದು ಹೇಳಿದೆ, ಅಲ್ಲದೆ, ಅರ್ಜಿದಾರರಿಗೆ ಎಲ್ಲಾ ಮೂಲ ದಾಖಲೆಗಳನ್ನು ಹಿಂತಿರುಗಿಸುವಂತೆ ಕಾಲೇಜು ಸಂಸ್ಥೆಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


