ರಾಜ್ಯ

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ: ಇಂದು ಕೊಡಗು ಬಂದ್

ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿ ಕಳೆದ ವಾರ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಎಂಬ ಕಾರ್ಯಕ್ರಮದಲ್ಲಿ ಟಿಪ್ಪು ಹಾಗೂ ಪ್ರವಾದಿಯವರ ಬಗ್ಗೆ ಅವಹೇಶನಕಾರಿ ಭಾಷಣ ಮಾಡಿದ ಆರೋಪದಡಿ ಪತ್ರಕರ್ತ ಸಂತೋಷ್ ತಮ್ಮಯ್ಯ...

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ: ಇಂದು ಕೊಡಗು ಬಂದ್
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ
Published On :
ಮಧುಗಿರಿ: ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿ ಕಳೆದ ವಾರ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಎಂಬ ಕಾರ್ಯಕ್ರಮದಲ್ಲಿ ಟಿಪ್ಪು ಹಾಗೂ ಪ್ರವಾದಿಯವರ ಬಗ್ಗೆ ಅವಹೇಶನಕಾರಿ ಭಾಷಣ ಮಾಡಿದ ಆರೋಪದಡಿ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. 
ಪತ್ರಕರ್ತನ ಬಂಧನ ಖಂಡಿಸಿ ಗೋಣಿಕೊಪ್ಪಲಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಗಿದ್ದು, ಇಂದೂ ಕೂಡ ಮಧ್ಯಾಹ್ನ 1 ಗಂಟೆ ಕಾಲ ಸಾಂಕೇತಿಕ ಕೊಡಗು ಬಂದ್ ಆಚರಿಸಲು ಕರೆ ನೀಡಲಾಗಿದೆ. 
ಸಂತೋಷ್ ತಮ್ಮಯ್ಯ ಅವರ ಬಂಧನ ಖಂಡಿಸಿ ಹಿಂದೂಪರ ಸಂಘಟನೆಗಳು ನಿನ್ನೆ ಗೋಣಿಕೊಪ್ಪಲಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು. ಬಸ್ ನಿಲ್ದಾಣದ ಎದುರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. 
ಹಿಂದೂಪರ ಸಂಘಟನೆಗಳ ಕರೆಯಂತೆ ನಿನ್ನೆ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ವಿರೋಧ ವ್ಯಕ್ತಪಡಿಸಲಾಯಿತು. ಸಂತೋಷ್ ತಮ್ಮಯ್ಯ ಅವರ ಬಂಧನ ಹಿಂದೂಪರ ಸಂಘಟನೆಗಳ ವಿರುದ್ಧ ನಡೆಯುತ್ತಿರುವ ಪಿತೂರಿಯಾಗಿದ್ದು, ಅವರಿಗೆ ನ್ಯಾಯ ಒದಗಿಸಬೇಕೆಂದು ಇಂದು ಮಧ್ಯಾಹ್ನವೂ ಸೀಮಿತ ಅವಧಿಗೆ ಕೊಡಗು ಬಂದ್'ಗೆ ಹಿಂದೂ ಸುರಕ್ಷಾ ವೇದಿಕೆ ಕರೆ ನೀಡಿದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪಟ್ಟಣಗಳಲ್ಲಿ ಅಂಗಡಿ-ಮುಂಗಟ್ಟು ಮುಚ್ಚಿ ಬೆಂಬಲ ನೀಡುವಂತೆ ವೇದಿಕೆ ಮನವಿ ಮಾಡಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.