ರಾಜ್ಯ

ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ಸಿಎಂ ಎಚ್ ಡಿಕೆ 12 ವರ್ಷದ ದ್ವೇಷ ತೀರಿಸಿಕೊಂಡಿದ್ದಾರೆ: ಜನಾರ್ದನ ರೆಡ್ಡಿ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ನನ್ನ ವಿರುದ್ಧದ 12 ವರ್ಷಗಳ...

ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ಸಿಎಂ ಎಚ್ ಡಿಕೆ 12 ವರ್ಷದ ದ್ವೇಷ ತೀರಿಸಿಕೊಂಡಿದ್ದಾರೆ: ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Published On :
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ನನ್ನ ವಿರುದ್ಧದ 12 ವರ್ಷಗಳ ಹಿಂದಿನ ದ್ವೇಷವನ್ನು ತೀರಿಸಿಕೊಂಡಿದ್ದಾರೆ ಎಂದು ಬುಧವಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
ಆ್ಯಂಬಿಡೆಂಟ್​ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿಗೆ ಇಂದು ಜಾಮೀನು ಸಿಕ್ಕಿದ್ದು, ಸಂಜೆ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ದೋಸ್ತಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಸಲ್ಲದ ಆರೋಪ ಹೊರಿಸಿ ಜೈಲಿಗೆ ತಳ್ಳಿದೆ. ನನ್ನ ವಿರುದ್ಧ ಷಡ್ಯಂತ್ರ ನಡೆಸಿದೆ. ಪ್ರಾಮಾಣಿಕ ಅಧಿಕಾರಿಗಳನ್ನು ಬಳಸಿಕೊಂಡು ಕುಮಾರಸ್ವಾಮಿ ಸ್ವತಃ ಈ ಷಡ್ಯಂತ್ರ ರೂಪಿಸಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ.
2006ರಲ್ಲಿ ನಾನು ಕುಮಾರಸ್ವಾಮಿ ವಿರುದ್ಧ 150 ಕೋಟಿ ರುಪಾಯಿ ಲಂಚದ ಆರೋಪ ಮಾಡಿದ್ದೆ. ಆ ನಂತರ  ಅವರು ನನ್ನ ಮೇಲೆ ಸುಳ್ಳು ಕೇಸ್​ ಹಾಕಿದ್ದರು. ಜನಾರ್ದನ ರೆಡ್ಡಿಯನ್ನು ಬಂಧನ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಅದನ್ನು 12 ವರ್ಷಗಳ ನಂತರ ನನ್ನನ್ನು ಬಂಧಿಸುವ ಮೂಲಕ ಆ ಆಸೆಯನ್ನು ಪೂರೈಸಿಕೊಂಡಿದ್ದಾರೆ ಎಂದು ರೆಡ್ಡಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.