ಕಾವೇರಿ ಮಾತೆ ಪ್ರತಿಮೆಯನ್ನು ಸರ್ದಾರ್ ಪಟೇಲ್ ಪ್ರತಿಮೆಗೆ ಹೋಲಿಸಲಾಗದು- ಡಿ. ಕೆ. ಶಿವಕುಮಾರ್
ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆಯನ್ನು ಅಹಮದಾಬಾದಿನಲ್ಲಿ ಬಿಜೆಪಿ ಸರ್ಕಾರ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯೊಂದಿಗೆ ಹೋಲಿಕೆ ಮಾಡಲಾಗದು ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದ ಉದ್ಯಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆಯನ್ನು ಅಹಮದಾಬಾದಿನಲ್ಲಿ ಬಿಜೆಪಿ ಸರ್ಕಾರ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯೊಂದಿಗೆ ಹೋಲಿಕೆ ಮಾಡಲಾಗದು ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ, ಇತಿಹಾಸ ಮತ್ತು ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ನಿರ್ಮಾಣ ಪ್ರಸ್ತಾವವನ್ನು ಸಿದ್ಧಪಡಿಸಲಾಗಿದೆ. ಗುಜರಾತ್ ಸರ್ಕಾರ 3 ಸಾವಿರ ಕೋಟಿ ರೂ. ವೆಚ್ಚ ಮಾಡಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಪ್ರತಿಮೆ ನಿರ್ಮಿಸಿದಂತೆ ಇಲ್ಲಿನ ಮೈತ್ರಿ ಸರ್ಕಾರ ಕಾವೇರಿ ಮಾತೆ ಪ್ರತಿಮೆ ನಿರ್ಮಾಣದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರದಲ್ಲಿ ಈ ಯೋಜನೆ ಕೈಗೊಳ್ಳಲು ಪ್ರಸ್ತಾವ ಇನ್ನೂ ಪೂರ್ಣಗೊಂಡಿಲ್ಲ. ಅಗತ್ಯವಾದರೆ ಬದಲಾವಣೆ ಮಾಡಲು ಯೋಚಿಸಲಾಗುವುದು ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಆರ್ಎಸ್ ಉದ್ಯಾನದಲ್ಲಿ ದೋಣಿ ವಿಹಾರ ಸರೋವರದ ಪಕ್ಕದಲ್ಲಿ ಮತ್ತೊಂದು ಕೆರೆ ನಿರ್ಮಿಸಿ ಅದರ ಮಧ್ಯಭಾಗದಲ್ಲಿ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಚಯ ರೂಪುಗೊಳ್ಳಲಿದೆ. ಈ ಸಮುಚ್ಛಯ ಮೇಲ್ಭಾಗದಲ್ಲಿ ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆ ನಿರ್ಮಾಣದ ಪ್ರಸ್ತಾವವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


