ಟಿಪ್ಪು ಜಯಂತಿ ಆಚರಣೆ ವಿಚಾರ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ; ಸಿಎಂ
ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.

Published On :
ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಿಎಂ ಕುಮಾರಸ್ವಾಮಿ, ಟಿಪ್ಪು ಜಯಂತಿ ವಿಷಯವನ್ನು ರಾಜಕೀಯಕರಣಗೊಳಿಸಲು ಯತ್ನಿಸುತ್ತಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ನವೆಂಬರ್ 10 ರಂದು ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಗೈರಾಗಿದ್ದರು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ವಿವರಣೆ ನೀಡಿದ ಅವರು, ಎಲ್ಲಾ ಕಾರ್ಯಕ್ರಮಗಳಿಗೂ ಹಾಜರಾಗಬೇಕೆಂಬ ಅವಶ್ಯಕತೆಯಿಲ್ಲ, ಸರ್ಕಾರದ ಪ್ರತಿನಿಧಿಗಳ ಸಮ್ಮುಖದಲ್ಲಿ ಅಧಿಕೃತ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಹೇಳಿದ್ದಾರೆ.
ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸ್ಥಳೀಯ ಕನ್ನಡ ಪತ್ರಿಕೆ ಸಂಪಾದಕರ ಮೇಲೆ ಕೇಸ್ ದಾಖಲಿಸಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನನಗೆ ಪ್ರಕರಣದ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


