ಶಿವಮೊಗ್ಗ: ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಸ್ಫೋಟ, ಚಾಲಕ ಸಜೀವ ದಹನ
ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

Published On :
ಶಿವಮೊಗ್ಗ: ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ಈ ಘಟನೆ ನಡೆದಿದೆ. ಸಿಲಿಂಡರ್ ತುಂಬಿದ್ದ ಲಾರಿ ತಾಳಗುಪ್ಪದಲ್ಲಿ ಪಲ್ಟಿಯಾಗಿದೆ. ಈ ವೇಳೆ ಲಾರಿಯಲ್ಲಿದ್ದ ಸಿಲಿಂಡರ್ ಗಳು ಸ್ಫೋಟಗೊಂಡ ಪರಿಣಾಮ ದಿಢೀರ್ ಬೆಂಕಿ ಹೊತ್ತಿಗೊಂಡಿದೆ. ಪರಿಣಾಮ ಲಾರಿ ಚಾಲಕ ಸಜೀವವಾಗಿ ದಹನವಾಗಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿದ್ದು, ಮೃತ ಚಾಲಕನನ್ನು ಕೃಷ್ಣಮೂರ್ತಿ ಗುರುತಿಸಿದ್ದಾರೆ. ಕೃಷ್ಣಮೂರ್ತಿ ಭದ್ರಾವತಿಯ ಮಾವಿನಕಟ್ಟೆ ಗ್ರಾಮದವರು ಎನ್ನಲಾಗಿದ್ದು, ಬೆಳಗ್ಗೆ ಸುಮಾರು ನಾಲ್ಕೂವರೆ ಗಂಟೆಗೆ ಘಟನೆ ನಡೆದಿದೆ. ಇಂಡೇನ್ ಗ್ಯಾಸ್ ಕಂಪನಿಗೆ ಸೇರಿದ ಲಾರಿ ಇದಾಗಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಫೋಟದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
karnataka policeಶಿವಮೊಗ್ಗಕರ್ನಾಟಕ ಪೊಲೀಸ್ShivamogaGas Cylinder ExplosionLorry Accidentಗ್ಯಾಸ್ ಸಿಲಿಂಡರ್ ಸ್ಫೋಟಲಾರಿ ಅಪಘಾತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


