'ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ' ಯೋಜನೆಗೆ ಸರ್ಕಾರ ಚಾಲನೆ
ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ' ಯೋಜನೆಗೆ ರಾಜ್ಯ ...

Published On :
ಬೆಂಗಳೂರು: ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ' ಯೋಜನೆಗೆ ರಾಜ್ಯ ಸರಕಾರ ಚಾಲನೆ ನೀಡಿದೆ.
ರಾಜ್ಯ ಸರಕಾರದ ಆರೋಗ್ಯ ಕರ್ನಾಟಕ ಮತ್ತು ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್‌ನ್ನು ಸಂಯೋಜಿತಗೊಳಿಸಿ ರೂಪಿಸಿದ ಹೊಸ ಯೋಜನೆಯಡಿ ರಾಜ್ಯದ ಎಲ್ಲ ಕುಟುಂಬಗಳಿಗೆ ಆರೋಗ್ಯ ಸೌಲಭ್ಯಗಳು ದೊರೆಯಲಿದೆ. ಸಂಯೋಜಿತ ಎಬಿ-ಎಆರ್‌ಕೆ ಯೋಜನೆಗೆ ಅಕ್ಟೋಬರ್ 30ರಂದು ಒಡಂಬಡಿಕೆ ನಡೆದಿದ್ದು, ಈಗಾಗಲೇ ಹಲವಾರು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಈ ವಿವರಗಳನ್ನು ವೈದ್ಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಡಿದರು.
ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ 62 ಲಕ್ಷ ಬಿಪಿಎಲ್ ಕಾರ್ಡ್‌ದಾರರಿಗೆ ಚಿಕಿತ್ಸೆ ದೊರೆಯಲಿದೆ. ಇದರಲ್ಲಿ ಶೇ. 60ರಷ್ಟು ಹಣವನ್ನು ಕೇಂದ್ರ ಸರಕಾರ ನೀಡಲಿದ್ದರೆ, ಉಳಿದ ಶೇ. 40ರಷ್ಟನ್ನು ರಾಜ್ಯ ಸರಕಾರ ಭರಿಸಲಿದೆ. ರಾಜ್ಯದಲ್ಲಿ ಒಟ್ಟು 115 ಲಕ್ಷ ಬಿಪಿಎಲ್ ಕಾರ್ಡ್‌ದಾರರಿಗೆ ಆರೋಗ್ಯ ಯೋಜನೆ ಅನ್ವಯವಾಗಲಿದ್ದು, ಉಳಿದ 53 ಲಕ್ಷ ಬಿಪಿಎಲ್ ಕಾರ್ಡ್‌ದಾರರ ಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಇದರಡಿ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ. ಹಾಗೂ ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.50 ಲಕ್ಷ ರೂ. ವರೆಗಿನ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ.
ಜತೆಗೆ 19 ಲಕ್ಷ ಎಪಿಎಲ್ ಕುಟುಂಬದವರ ಚಿಕಿತ್ಸೆಗೆ ನಿಗದಿಯಾದ ಪೂರ್ಣ ಮೊತ್ತವನ್ನು ರಾಜ್ಯ ಸರಕಾರವೇ ನೀಡಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಡಿಕೆ ಶಿವಕುಮಾರ್ಆರೋಗ್ಯ ಯೋಜನೆArogya Karnatakaಆರೋಗ್ಯ ಕರ್ನಾಟಕAyushman Bharathealth scheme. D.K Shivakumarಆಯುಷ್ಮಾನ್ ಭಾರತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


