ಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ
ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ...

Published On :
ಹುಬ್ಬಳ್ಳಿ: ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಮುಂಬೈನ ಫಾಟ್ಕೋಪರ್ ಮತ್ತು ದಾದರ್ ಮೂಲದ ವಿಶ್ವನಾಥ ಮ್ಹಾತ್ರೆ (76), ದಿನಕರ ಮ್ಹಾತ್ರೆ (74), ರಮೇಶ ಜಯಮಾಲ (70), ಸುಮೇದಾ ಜಮಖಂಡಿಕರ (65), ಸುಚಿತ್ರಾ ರೌಲ್ (61), ಲಾಹು ಕೆಲೋಸ್ಕರ್ (65) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ.
ಹುಬ್ಬಳ್ಳಿಯಿಂದ ಹಂಪಿಗೆ ತೆರಳುವಾಗ ಬೆಳಗಿನ ಜಾವ 5.30ರ ಸುಮಾರಿಗೆ ಭದ್ರಾಪುರ ಬಳಿ ಎಡಭಾಗದಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಇದಕ್ಕೆ ಬಸ್ ಗುದ್ದುವುದನ್ನು ತಪ್ಪಿಸಲು ಚಾಲಕ ಬಲಭಾಗಕ್ಕೆ ತಿರುಗಿಸಿದ್ದಾನೆ. ಈ ವೇಳೆ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದು, ಬಸ್ ಪಲ್ಟಿಯಾಗಿ ಘಟನೆ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


