2 ವಾರಗಳಲ್ಲಿ ಸಂಪುಟ ವಿಸ್ತರಣೆ: ಕಾಂಗ್ರೆಸ್
ಕಾಂಗ್ರೆಸ್ ಪಕ್ಷದಲ್ಲಿ ಸಂಪುಟ ಸಂಕಟ ಮತ್ತೆ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಹಿನ್ನಲೆಯಲ್ಲಿ ಇನ್ನೆರಡು ವಾರಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ...

Published On :
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಂಪುಟ ಸಂಕಟ ಮತ್ತೆ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಹಿನ್ನಲೆಯಲ್ಲಿ ಇನ್ನೆರಡು ವಾರಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಕಾಂಗ್ರೆಸ್'ನಿಂದ 6 ಹಾಗೂ ಜೆಡಿಎಸ್ ನಿಂದ ಇಬ್ಬರು ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ನವೆಂಬರ್ ಅಂತ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗಿತ್ತು. ಒಟ್ಟಾರೆ 8 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುತ್ತದೆ. ಇದರಲ್ಲಿ ಒಬ್ಬರು ಬೆಳಗಾವಿಯವರಾಗಿರುತ್ತಾರೆಂದು ಹೇಳಿದ್ದಾರೆ.
ಸಚಿವ ಸ್ಥಾನಕ್ಕಾಗಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಂಜಲಿ ನಿಂಬಾಳ್ಕರ್ ಅವರು ಲಾಬಿ ನಡೆಸುತ್ತಿದ್ದು, ಈ ಮೂವರಲ್ಲಿ ಸಂಪುಟ ಸೇರುವವರಾರು ಎಂಬುದಕ್ಕೆ ಪರಮೇಶ್ವರ್ ಅವರು ಸ್ಪಷ್ಟನೆಗಳನ್ನು ನೀಡಿಲ್ಲ.
ಚಳಿಗಾಲ ಅಧಿವೇಶನ ಆರಂಭಗೊಳ್ಳುವುದಕ್ಕೂ ಮುನ್ನ ಮುಂದಿನ ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಮೈತ್ರಿ ಪಕ್ಷ ನಿರ್ಧರಿಸಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ನಾಯಕರನ್ನು ಸಮಾಧಾನಪಡಿಸಲು ಯತ್ನಿಸುತ್ತಿದೆ.
ಕಳೆದ ನಾಲ್ಕು ತಿಂಗಳಿನಿಂದಲೂ ಸಂಪುಟ ವಿಸ್ತರಣೆ ಬಗ್ಗೆ ಮಾತುಗಳು ಕೇಳಿಬರುತ್ತಲೇ ಇದೆ. ಆದರೆ, ಯಾವಾಗ ಸಂಪುಟ ವಿಸ್ತರಣೆ ಮಾಡುತ್ತಾರೆಂಬುದಕ್ಕೆ ನಮಲ್ಲೂ ಸ್ಪಷ್ಟ ಉತ್ತರಗಳಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರಕು ಹೇಳಿದ್ದಾರೆ.
ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಇತರೆ ಕಾಂಗ್ರೆಸ್ ಹಿರಿಯ ನಾಯಕರು ಬೆಂಗಳೂರಿನಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು, ಸಭೆ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಸಂಪುಟ ವಿಸ್ತರಣೆ ಈ ತಿಂಗಳ ಅಂತಿಮದಲ್ಲಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.
ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಜಿಲ್ಲೆಗಳಿಗೆ ಪ್ರಾಮುಖ್ಯತೆ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆಂದು ಬಿ.ಸಿ ಪಾಟೀಲ್ ಅವರು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿಗಳನ್ನೂ ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುತ್ತದೆ. ಯಾವುದೇ ಕಾಂಗ್ರೆಸ್ ಶಾಸಕರೂ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
ಸಂಪುಟ ವಿಸ್ತರಣೆಯಾಗಲೂ ಇನ್ನೂ ಹೆಚ್ಚು ಸಮಯವಾಗುತ್ತದೆ. ಪ್ರಸ್ತುತ ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಕಾರ್ಯನಿರತರಾಗಿರುವುದರಿಂದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಇನ್ನೂ ಕೆಲ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


