ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯವಿದೆ: ವೈ ಎಸ್ ವಿ ದತ್ತ
ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ..

Published On :
ಮೂಡಬಿದ್ರಿ: ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ಹೇಳಿದ್ದಾರೆ.
ಮೂಡಬಿದ್ರಿಯಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿ ಕಾರ್ಯಕ್ರಮದ 2ನೇ ದಿನದಲ್ಲಿ ಮಾತನಾಡಿದ ದತ್ತ, ಆರಂಭಿಕ ಹಂತದಲ್ಲೇ ಸಮಸ್ಯೆಗಳನ್ನು ಗಮನಿಸಿ ಬಗೆಹರಿಸಿದಿದ್ದರೇ ರಾಜ್ಯ. ವಿಭಜನೆಯಾಗುವ ಬೆದರಿಕೆಯಿದೆ, ಪ್ರಾದೇಶಿಕ ಸಮತೋಲನ ಕಾಪಾಡುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಭಾಗಗಳಿಗೂ ಬಜೆಟ್ ನಲ್ಲಿ ಸಮಾನವಾಗಿ ಅನುದಾನ ಹಂಚಿಕೆಯಾಗಿಲ್ಲ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹೆಚ್ಚಿನ ಮಟ್ಟದ ಹಣ ನೀಡುವ ಅಗತ್ಯವಿದೆ, ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುY S V Dattaವೈಎಸ್ ವಿ ದತ್ತN-Karnataka Development Authorityಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


