ಹೊಸನಗರ: ಪ್ರತಿಭಟನಾನಿರತ ರೈತ ನಿಧನ, ಆರ್ ಎಫ್ ಓ ವಿರುದ್ಧ ಪ್ರಕರಣ ದಾಖಲು
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಪ್ರತಿಭಟನಾನಿರತ ರೈತ ನಿಧನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಲಯ ಅರಣ್ಯಾಧಿಕಾರಿ ಜಿ ಹನುಮಂತಯ್ಯ ವಿರುದ್ಧ ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಸಾರೂರು: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಪ್ರತಿಭಟನಾನಿರತ ರೈತ ನಿಧನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಲಯ ಅರಣ್ಯಾಧಿಕಾರಿ ಜಿ ಹನುಮಂತಯ್ಯ ವಿರುದ್ಧ ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಸಾರೂರು ಬಳಿ 300 ಎಕರೆ ಅರಣ್ಯ ಪ್ರದೇಶದಲ್ಲಿ 170 ಎಕರೆಯಷ್ಟು ಪ್ರದೇಶವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಮಾಸಾರೂರಿನಲ್ಲಿ ಅರಣ್ಯ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಒತ್ತುವರಿದಾರರ ಹೆಸರಿನಲ್ಲಿ ಮೃತ ರೈತನ ಹೆಸರಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
300 ಅರಣ್ಯ ಇಲಾಖೆ ಸಿಬ್ಬಂದಿಗಳು , 250 ಪೊಲೀಸರೊಂದಿಗೆ ತಮ್ಮ ಊರಿನ ಕಡೆ ಬರುತ್ತಿರುವ ಸುದ್ದಿ ತಿಳಿದು ಮೃತ ಲಕ್ಷ್ಮಣಪ್ಪ ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆ ಧರಣಿ ಆರಂಭಿಸಿದ್ದಾರೆ. ನಂತರ ಅವರು ಕುಸಿದು ಬಿದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಕುಸಿದು ಬಿದು ಮೃತಪಟ್ಟಿದ್ದಾರೆ. ಇದಕ್ಕೆ ಕಾರಣವಾದ ವಲಯ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತ ಲಕ್ಷ್ಮಣಪ್ಪನ ಪುತ್ರ ನಾಗೇಶ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


