ಖಾಲಿ ಇರುವ 10,445 ಹುದ್ದೆ ಭರ್ತಿ ಮಾಡಲು ಕುಮಾರಸ್ವಾಮಿ ಸರ್ಕಾರ ಮುಂದು
ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ...

Published On :
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ನೇಮಕ ಕಾರ್ಯ ನಡೆಸಲು ನಿರ್ಧರಿಸಿದೆ.
ವಿಧಾನದ ಅನುಚ್ಛೇದ 371ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲಾ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿರುವ ಮುಖ್ಯ ಕಾರ್ಯದರ್ಶಿ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದ್ದಾರೆ, ನಗರಾಭಿವೃದ್ಧಿ ಇಲಾಖೆಯಲ್ಲಿ ಅತಿ ಹೆಚ್ಚು ಅಂದರೆ 3,467 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.
ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕೆಂದು ಆದೇಶ ಹೊರಡಿಸಲಾಗಿದೆ, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಹೆಚ್ಚಿನ ಹುದ್ದೆ ನೀಡಲು ನಿರ್ದರಿಸಲಾಗಿದೆ. ಹಲವು ಇಲಾಖೆಗಳಲ್ಲಿ ಹೆಚ್ಚಿನ ಹುದ್ದೆ ಖಾಲಿಯಿದ್ದು, ದೈನಂದಿನ ಕೆಲಸಗಳಗಳು ವಿಳಂಭವಾಗುತ್ತಿವೆ, ಈ ಹಿನ್ನೆಲೆಯಲ್ಲಿ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿಜಯ್ ಭಾಸ್ಕರ್ ತಿಳಿಸಿದ್ದಾರೆ. ಈ ವರ್ಷದ ಅಂತ್ಯದೊಳಗೆ ಎಲ್ಲಾ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ವರದಿಗಳ ಪ್ರಕಾರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.67 ಲಕ್ಷ ಹುದ್ದೆ ಖಾಲಿಯಿವೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka Governmentrecruitmentಕರ್ನಾಟಕ ಸರ್ಕಾರವಿಜಯ್ ಭಾಸ್ಕರ್ನೇಮಕಾತಿVijaya bhaskarVacant Postsಖಾಲಿ ಹುದ್ದೆಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


