ರಾಜ್ಯ

ರಾಜ್ಯ ಪ್ರವಾಹ ಪರಿಹಾರಕ್ಕೆ ಕೇಂದ್ರದಿಂದ 546 ಕೋಟಿ ರು. ನೆರವು

ರಾಜ್ಯದ ಕೊಡಗು ಸೇರಿದಂತೆ 7 ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 546 ಕೋಟಿ ರು ಅನುದಾನ ಪರಿಹಾರ ಮಂಜೂರು ...

ರಾಜ್ಯ ಪ್ರವಾಹ ಪರಿಹಾರಕ್ಕೆ ಕೇಂದ್ರದಿಂದ 546 ಕೋಟಿ ರು. ನೆರವು
ಕೊಡಗು ಪ್ರವಾಹ(ಸಂಗ್ರಹ ಚಿತ್ರ)
Published On :
ನವದೆಹಲಿ:  ರಾಜ್ಯದ ಕೊಡಗು ಸೇರಿದಂತೆ 7 ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 546 ಕೋಟಿ ರು ಅನುದಾನ ಪರಿಹಾರ  ಮಂಜೂರು ಮಾಡಿದೆ. 
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಹಣಕಾಸು ಸಚಿವ ಅರುಣ್ ಜೈಟ್ಲಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ವಿಕೋಪ ನಿರ್ವಹಣೆ ನಿಧಿ ಅಡಿಯಲ್ಲಿ ಅನುದಾನ ಮಂಜೂರು ಮಾಡಲು ನಿರ್ಧರಿಸಲಾಗಿದೆ,
ಕೊಡಗು ಸಹಿತವಾಗಿ ರಾಜ್ಯದ ವಿವಿಧ ಭಾಗದಲ್ಲಿ ಮಹಾಮಳೆಗೆ ಸಾವಿರಾರು ಕೋಟಿ ರೂ.ಗಳಷ್ಟು ನಷ್ಟವಾಗಿತ್ತು. ಕೊಡಗಿನ ವಿವಿಧ ಭಾಗದಲ್ಲಿ ಭೂ ಕುಸಿತದಿಂದ ಜೀವ ಹಾನಿ, ಮನೆ, ಜಮೀನು ಸಂಪೂರ್ಣ ನಾಶವಾಗಿತ್ತು. ಇದೆಲ್ಲದಕ್ಕೂ ಪರಿಹಾರ ಕೋರಿ ಆಗಸ್ಟ್‌ ತಿಂಗಳಲ್ಲಿ ಕೇಂದ್ರಕ್ಕೆ ವಿಸ್ತೃತ ಪ್ರಸ್ತಾವನೆ ರಾಜ್ಯದಿಂದ ಸಲ್ಲಿಸಲಾಗಿತ್ತು.
 ಪ್ರಸ್ತಾವನೆಯ ಆಧಾರದಲ್ಲಿ ರಾಜ್ಯಕ್ಕೆ 546 ಕೋಟಿ ರೂ.ಗಳನ್ನು ಮಂಜೂರು ಮಾಡಲು ಸೋಮವಾರ ಕೇಂದ್ರದ ಉನ್ನತ ಮಟ್ಟದ ಸಮಿತಿ ಅನುಮತಿ ನೀಡಿದೆ ಎಂದು ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗರಾಮ್‌ ಬಡೇರಿಯಾ ಪ್ರಕಟಣೆಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.